ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್, ರೋರಸ್ & ರೇಂರ‍್ಸ್, ಬನ್ನಿ, ಕಬ್ಸ್& ಬುಲ್ ಬುಲ್ ಘಟಕಗಳನ್ನು ಉದ್ಘಾಟನೆ.
ಮೂಡುಬಿದಿರೆ: ವಿದ್ಯಾರ್ಥಿಗಳನ್ನು ಒಳ್ಳೆಯ ನಾಗರಿಕನನ್ನಾಗಿ ಮಾಡುವುದೇ ಸ್ಕೌಟ್ಸ್ ಮತ್ತು ಗೈಡ್ಸ್ನ ಧೈಯೋದ್ಧೇಶ. ಪ್ರತಿಯೊಬ್ಬರು ಇದರ ನಿಯಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ಗೆ ಸೇರಲು ತುಂಬಾ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧಿಯಾ ಅಭಿಪ್ರಾಯ ಪಟ್ಟರು.
ಅವರು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರೋರ‍್ಸ್, ರೇಂರ‍್ಸ್, ಬನ್ನಿ, ಕಬ್ಸ್ ಮತ್ತು ಬುಲ್ ಬುಲ್ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು.
ಪರಿಸರದಲ್ಲಿ ಜೀವಿಸುತ್ತಿರುವ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಎಲ್ಲಾ ಪ್ರಾಣಿ ಪಕ್ಷಿಗಳನ್ನು, ಮನುಷ್ಯರನ್ನು ಪ್ರೀತಿಯಿಂದ ಕಾಣಬೇಕು. ಇದನ್ನು ಸ್ಕೌಟ್ಸ್ ಗೈಡ್ಸ್ ಕಲಿಸುತ್ತದೆ. ದೇವರಲ್ಲಿ ನಂಬಿಕೆ, ಮಾನಸಿಕ ಹಾಗೂ ದೈಹಿಕವಾಗಿ ಸದೃಢನನ್ನಾಗಿಸುವುದು, ಹಾಗೂ ಸೇವಾ ಮನೋಭಾವನೆಯನ್ನು ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು. ಒಬ್ಬ ನಾಗರಿಕನಾಗಿ ನನ್ನ ಜವಬ್ದಾರಿಗಳೇನು ಎಂದು ಅರಿತುಕೊಳ್ಳಬೇಕು ಎಂದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾರು ಬೇರೆಯವರಿಗೋಸ್ಕರ ಬದುಕುತ್ತಾರೊ ಅವರ ಹೆಸರು ಅಜರಾಮರವಾಗಿರುತ್ತದೆ. ಬದುಕು ಹೇಗಿದೆ ಅದನ್ನು ನಾವು ಹೇಗೆ ನಡೆಸಿಕೊಂಡು ಹೋಗಬೇಕು ಎಂಬುದನ್ನು ಇಂತಹ ಘಟಕಗಳ ಮೂಲಕ ಕಲಿಯಬೇಕು. ದೇಶಕ್ಕೆ ನಿಮ್ಮಿಂದ ಎಷ್ಟು ಸಾಧವೊ ಅಷ್ಟು ಕೊಡುಗೆಗಳನ್ನು ನೀಡಿ. ಸಮಾಜ ಸೇವೆ ಬದುಕಿನ ಮೂಲ ಮಂತ್ರವಾಗಲಿ ಎಂದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ಶಾಲೆಯಲ್ಲಿ ಹೆಚ್ಚೆಚ್ಚು ವಿದ್ಯಾರ್ಥಿಗಳು ಸೇರಬೇಕು. ಆ ಮೂಲಕ ಕ್ರೀಯಾಶೀಲ ವ್ಯಕ್ತಿತ್ವ ರೂಪಿಸಿಕೊಂಡು ಪರಿಸರವನ್ನು ಪ್ರೀತಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಸಂಘಟಕ ಪ್ರಭಾಕರ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಸಂಘಟಕ ಭರತ್‌ಕುಮಾರ್, ಮೂಡಬಿದಿರೆ ತಾಲೂಕಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯದರ್ಶಿ ಭಾರತಿ ನಾಯಕ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಸಿಬಿಎಸ್‌ಸಿ ಶಾಲೆಯ ಸಂಯೋಜಕ ಪ್ರಸಾದ್, ಸ್ಕೌಟ್ಸ್ ಮತ್ತು ಗೈಡ್ಸ್ ಮಾಸ್ರ‍್ಸ್, ರೋರ‍್ಸ್ & ರೇಂರ‍್ಸ್ ಲೀರ‍್ಸ್, ಬನ್ನಿ, ಕಬ್ಸ್ ಮತ್ತು ಬುಲ್ ಬುಲ್ ಮಾಸ್ರ‍್ಸ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನೂತನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸ್ಕಾರ್ಫ್ಗಳನ್ನು ವಿತರಿಸಲಾಯಿತು. ಉಪ ಮುಖ್ಯೋಪಧ್ಯಾಯರು ಜಯಶೀಲ ಕಾರ್ಯಕ್ರಮವನ್ನು ನಿರೂಪಿಸಿದರು, ವಿದ್ಯಾರ್ಥಿನಿ ಮಾನಿತ ಸ್ವಾಗತಿಸಿದರು, ರೋರ‍್ಸ್ ಲೀಡರ್ ಪ್ರದೀಪ್ ಅಥಿತಿಗಳನ್ನು ಪರಿಚಯಿಸಿದರು. ಮಾನ್ಯ ವಂದಿಸಿದರು,
0 Comments