ವಿದ್ಯಾರ್ಥಿಗಳು ಕ್ರೀಡಾಪಟುಗಳು ಬಲಿಷ್ಠರಾದರೆ ದೇಶ ಬಲಿಷ್ಠ : ಯು.ಟಿ ಖಾದರ್
ಮೂಡುಬಿದಿರೆ : ಭಾರತ ದೇಶ ವಿಶ್ವದಲ್ಲೇ ಒಂದನೇ ಸ್ಥಾನ. ಬರಬೇಕಾದರೆ ಶಾಸಕರು, ಮಂತ್ರಿಗಳು ವಿಧಾನಸಭೆಯಲ್ಲಿ ಕುಳಿತುಕೊಂಡರೆ ಸಾಲದು ಅಥವಾ ಪಾರ್ಲಿಮೆಂಟಿನಲ್ಲಿ ಕುಳಿತುಕೊಳ್ಳುವ ಸಂಸದರಿಂದ, ಎಸಿ ರೂಮಿನಲ್ಲಿ ಕುಳಿತುಕೊಳ್ಳುವ ಐಎಎಸ್ ಅಧಿಕಾರಿಗಳಿಂದ ದೇಶ ಬಲಿಷ್ಠವಾಗಲ್ಲ. ಬದಲಾಗಿ ಕ್ಲಾಸ್ ರೂಮಿನಲ್ಲಿ ಕಲಿಯುವ ಮತ್ತು ಕ್ರೀಡಾಂಗಣದಲ್ಲಿ ಆಟವಾಡುವ ವಿದ್ಯಾರ್ಥಿ ವಿದ್ಯಾರ್ಥಿಯರಿಂದ ಮಾತ್ರ ದೇಶ ಬಲಿಷ್ಠವಾಗಲು ಸಾಧ್ಯವಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು.
ಅವರು ಎಕ್ಸಲೆಂಟ್ ಕಾಲೇಜಿನಲ್ಲಿ ಗುರುವಾರ ಸಾಧಕ ವಿದ್ಯಾಥಿಗಳನ್ನು ಸನ್ಮಾನಿಸಿ ವಿದ್ಯಾರ್ಥಿವೇತನ ವಿತರಣೆ ಮತ್ತು 225 ಕಿ.ವ್ಯಾಟ್ ಸೋಲಾರ್ ವಿದ್ಯುತ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಶೈಕ್ಷಣಿಕ ಸಂಸ್ಥೆ ಪ್ರಾರಂಭ ದೇಶ ಪ್ರೇಮದ ಸಂಕೇತ. ಅಧಿಕ ಅಂಕವನ್ನು ಮಾತ್ರ ಪಡೆದರೆ ಸಾಲದು ಬದಲಾಗಿ ಉತ್ತಮ ವ್ಯಕ್ತಿತ್ವ, ಪ್ರಾಮಾಣಿಕತೆ, ಮಾನವೀಯತೆ, ದೇಶಪ್ರೇಮವನ್ನು ಮೈಗೂಡಿಸಿಕೊಂಡು ಉನ್ನತ ಸಾಧನೆ ಮಾಡಿ ದೇಶದ ಆಸ್ತಿಯಾಗಿ ಬೆಳೆಯಿರಿ. ಆದರೆ ಕುಟುಂಬವನ್ನು, ಸಮಾಜವನ್ನು ಮರೆಯದಿರಿ ಎಂದು ಸಲಹೆ ನೀಡಿದರು.
ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್‌ನ ಸಹಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್ ಕಾಲೇಜಿನಲ್ಲಿ ಅಳವಡಿಸಲಾದ ೨೨೫ಕಿ.ವ್ಯಾಟ್ ಸೋಲಾರ್ ವಿದ್ಯುತ್ ಘಟಕವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಸಂಚಿಕೆ ಮೌಲ್ಯವನ್ನು ಲೋಕಾರ್ಪಣೆಗೊಳಿಸಿದರು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು.
ಸಾಧಕ ವಿದ್ಯಾರ್ಥಿನಿ ಯುವಿಕ ಭಾಗವಹಿಸಿದ ಮೌಲ್ಯ ವೈ.ಆರ್. ಜೈನ್ , ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಗುಣಸಾಗರ ಡಿ., ಭಾರ್ಗವಿ ಎಂ.ಜಿ ಸೇರಿದಂತೆ ಶಿಕ್ಷಣ ಸಂಸ್ಥೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿವೇತನದೊಂದಿಗೆ ಅಭಿನಂದಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಯುವರಾಜ್ ಜೈನ್ ಕಾಲೇಜಿನಲ್ಲಿ ಸಸ್ಯಶ್ಯಾಮಲ ಯೋಜನೆಯಡಿ ಸಾವಿರ ಗಿಡಗಳನ್ನು ನೆಡುವ ಯೋಜನೆಯ ಕುರಿತು ಮಾಹಿತಿ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಚೌಟರ ಅರಮನೆಯ ಕುಲದೀಪ್ ಎಂ. ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವಿಕ್ರಮ್ ನಾಯಕ್, ರೇಣುಕಾ ಆಚಾರ್ಯ ಕಾರ್ಯಕ್ರಮ ನಿರ್ವಹಿಸದರು.
0 Comments