ಮೂಡುಬಿದಿರೆ ,ಹರ್ ಘರ್ ತಿರಂಗಾ" ಅಭಿಯಾನ
ಮೂಡುಬಿದಿರೆ: ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶ ವ್ಯಾಪ್ತಿಯಲ್ಲಿ " ಹರ್ ಘರ್ ತಿರಂಗಾ" ಅಭಿಯಾನ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಮೂಡುಬಿದಿರೆಯ ಒಂಟಿಕಟ್ಟೆಯ ಗಣೇಶ್ ಸಾಲ್ಯಾನ್ ಅವರ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಶಾಸಕ ಉಮಾನಾಥ ಎ.ಕೋಟ್ಯಾನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಂಡಲದ ಕಾರ್ಯದರ್ಶಿ ರಂಜಿತ್ ಪೂಜಾರಿ, ಪುರಸಭಾ ಸದಸ್ಯ ನಾಗರಾಜ ಪೂಜಾರಿ, ಮೂಡುಬಿದಿರೆ ನಗರಾಧ್ಯಕ್ಷ ಲಕ್ಷ್ಮಣ್ ಪೂಜಾರಿ, ಲತಾ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
0 Comments