ನೆಲ್ಲಿಕಾರಿನಲ್ಲಿ ವರಮಹಾಲಕ್ಷ್ಮಿ ಪೂಜೆ
ನೆಲ್ಲಿಕಾರಿನ ಓಂ ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ ನೆಲ್ಲಿಕಾರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಯಿತು.
ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ಹರೀಶ್ ಆಚಾರ್ಯ ಅವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ,ಗ್ರಾಮ ಮೊಕ್ತೇಸರರಾದ ಕರುಣಾಕರ ಆಚಾರ್ಯ,ಉಪಾಧ್ಯಕ್ಷರಾದ ಹರೀಶ್ ಆಚಾರ್ಯ,ಪುರುಷೋತ್ತಮ ಆಚಾರ್ಯ, ಕಾರ್ಯದರ್ಶಿ ಪ್ರವೀಣ್ ಆಚಾರ್ಯ,ನವೀನ ಆಚಾರ್ಯ, ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಶ್ರೀಮತಿ ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.
0 Comments