*ಆತ್ಮ ಜಾಗೃತಿಯ ಮೂಲಕ ಹೊಸ ಬದುಕನ್ನು ಕಟ್ಟೋಣ:ಡಾ.ರಾಮಕೃಷ್ಣ ಶಿರೂರು*

ಜಾಹೀರಾತು/Advertisment
ಜಾಹೀರಾತು/Advertisment

 *ಆತ್ಮ ಜಾಗೃತಿಯ ಮೂಲಕ ಹೊಸ ಬದುಕನ್ನು ಕಟ್ಟೋಣ:ಡಾ.ರಾಮಕೃಷ್ಣ ಶಿರೂರು* 


ಭಾರತ ದೇಶದ 78ನೇ ಸ್ವಾತಂತ್ರ್ಯೋತ್ಸವ ವಿದ್ಯಾರ್ಥಿಗಳ ಮತ್ತು ಯುವ ಜನಾಂಗದ ಭವಿಷ್ಯದ ಕನಸಿಗೆ ಮಾರ್ಗಸೂಚಿಯಾಗಬೇಕು. ತನ್ನ ಕನಸಿನ ಗುರಿಯನ್ನು ತಲುಪಲು ಹೆದ್ದಾರಿಯಾಗಬೇಕು. ಆ ರೀತಿಯಲ್ಲಿ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ನಮ್ಮ ಹಿರಿಯರ ನಿರಂತರ ಪರಿಶ್ರಮದ ಫಲವಾಗಿ, ಜನಜಾಗೃತಿಯ ಫಲ ಶ್ರುತಿಯಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ. ಇಂದು ಆತ್ಮ ಜಾಗೃತಿಯ ಮೂಲಕ ನಮ್ಮ ಬದುಕನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಇದಕ್ಕೆ 78ನೇ ಸ್ವಾತಂತ್ರ್ಯೋತ್ಸವ ಕಾರಣವಾಗಲಿ ಎಂದು ಅಧ್ಯಾಪಕ, ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ಹೋಬಳಿ ಘಟಕದ ಅಧ್ಯಕ್ಷ ಡಾ.ರಾಮಕೃಷ್ಣ ಶಿರೂರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಅವರು ಮೂಡುಬಿದಿರೆ ಹೋಲಿ ರೋ


ಸರಿ ವಿದ್ಯಾಸಂಸ್ಥೆಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ಜೀವನದಲ್ಲಿ ಸತ್ಯ, ಪ್ರಮಾಣಿಕತೆ, ನಿಸ್ವಾರ್ಥ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರ ಮೂಲಕ ದೇಶದ ಭವಿಷ್ಯದ ಉತ್ತಮ ಪ್ರಜೆಗಳಾಗಿ ನಾವು ಬೆಳೆಯಬೇಕಾಗಿದೆ. ಆ ಮೂಲಕ ಅಖಂಡ ಭಾರತದ ಶ್ರೇಷ್ಠ ಪ್ರಜೆಗಳಾಗಿ ಭಾರತ ಮಾತೆಗೆ ಕೃತಜ್ಞತೆಯನ್ನು ಸಲ್ಲಿಸೋಣ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿರುವ ಹೋಲಿ ರೋಸರಿ ಪ್ರೌಢಶಾಲೆಯ ಮುಖ್ಯ ಅಧ್ಯಾಪಕಿ ಭಗಿನಿ ಸುನೀತಾ ಮೊಂತೆರೊ, ಹೋಲಿ ರೋಸರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಮಾ ಅವರು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ರಿತೇಶ್ ಇರಾ ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನೆರವೇರಿತು. 10ನೇ ತರಗತಿಯ ಪಾತಿಮತ್ ಇನಾಝ್ ಎಲ್ಲರನ್ನು ಸ್ವಾಗತಿಸಿದರು. ಕುಮಾರಿ ರಮ್ಯಾ ಧನ್ಯವಾದ ಕಾರ್ಯಕ್ರಮ ನಡೆಸಿ ಕೊಟ್ಟರು.ಕುಮಾರಿ ಕಾವ್ಯ ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments