ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ ಹಿಂದೂಗಳಿಗೆ ನ್ಯಾಯ ಒದಗಿಸಲಿ *ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆ ಖಂಡಿಸಿ ಮೂಡುಬಿದಿರೆಯಲ್ಲಿ ಮಾನವ ಸರಪಳಿ

ಜಾಹೀರಾತು/Advertisment
ಜಾಹೀರಾತು/Advertisment

 ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ ಹಿಂದೂಗಳಿಗೆ ನ್ಯಾಯ ಒದಗಿಸಲಿ

*ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆ ಖಂಡಿಸಿ ಮೂಡುಬಿದಿರೆಯಲ್ಲಿ ಮಾನವ ಸರಪಳಿ 

ಮೂಡುಬಿದಿರೆ : ಬಾಂಗ್ಲಾದ ಆಂತರಿಕ ಸಮಸ್ಯೆಯನ್ನು ಮುಂದಿಟ್ಟುಕೊಂಡು ಅಮಾಯಕ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ. ಕೂಡಲೇ ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ ಹಿಂದೂಗಳಿಗೆ ನ್ಯಾಯ ಒದಗಿಸಬೇಕು ಎಂದು ಆರ್‌ಎಸ್‌ಎಸ್ ಪ್ರಮುಖ ಮಂಜುನಾಥ ಶೆಟ್ಟಿ ಆಗ್ರಹಿಸಿದ್ದಾರೆ.


ಅವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಮೂಡುಬಿದಿರೆ ಬಸ್‌ನಿಲ್ದಾಣದಲ್ಲಿ ಮಾನವ ಸರಪಳಿ ನಡೆಸುವ ಮೂಲಕ ನಡೆದ  ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

  ಹಿಂದೂಗಳಲ್ಲಿರುವ ಭಯದ ವಾತಾವರಣವನ್ನು ಹೋಗಲಾಡಿಸಬೇಕು.

ಸಣ್ಣಪುಟ್ಟ ಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸುವ ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಮಾನವ ಹಕ್ಕು ಸಂಘಟನೆಗಳು ಈಗೇಕೆ ಮೌನ ವಹಿಸಿವೆ? ಹಿಂದೂಗಳಿಗೆ ಮಾನವ ಹಕ್ಕುಗಳಿಲ್ಲವೇ ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. 

ಸೋಮನಾಥ ಕೋಟ್ಯಾನ್ ಖಂಡನಾ ನಿರ್ಣಯವನ್ನು ಮಂಡಿಸಿದರು. 

ಬಿಜೆಪಿ‌ ಜಿಲ್ಲಾ ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ, ಬಾಹುಬಲಿ ಪ್ರಸಾದ್, ಸಮಿತಿಯ ಪ್ರಮುಖರಾದ ರಂಜಿತ್ ಪೂಜಾರಿ ಮತ್ತಿತರಿದ್ದರು.

Post a Comment

0 Comments