ಮೂಡುಬಿದಿರೆ ಪುರಸಭೆಯ ಅಧ್ಯಕ್ಷ & ಉಪಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ಪುರಸಭೆಯ ಅಧ್ಯಕ್ಷ & ಉಪಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ

ಕಳೆದೊಂದು ವರ್ಷದಿಂದ ಖಾಲಿಯಾಗಿದ್ದ ಮೂಡುಬಿದಿರೆ ಪುರಸಭೆಯ ಅಧ್ಯಕ್ಷ /ಉಪಾಧ್ಯಕ್ಷರ ಸ್ಥಾನಕ್ಕೆ ಆ.21(ಬುಧವಾರ) ಚುನಾವಣೆ ನಡೆಯಲಿದೆ.

  ಮೀಸಲಾತಿ ಈಗಾಗಲೇ ಪ್ರಕಟಗೊಂಡಿದ್ದು

ಅಧ್ಯಕ್ಷ ಸ್ಥಾನಕ್ಕೆ ಹಿಂ.ವ.ಎ. ಮಹಿಳಾ ಮೀಸಲಾತಿ ದೊರೆತಿದೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯರ ಪಾಲಾಗಿದೆ. ಪುರಸಭೆಯ 23 ಸದಸ್ಯ ಬಲದಲ್ಲಿ ಬಿಜೆಪಿ 13 ಕಾಂಗ್ರೆಸ್ 12 ಸದಸ್ಯ ಬಲ ಹೊಂದಿದೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಜಯಶ್ರೀ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗರಾಜ್ ಪೂಜಾರಿ ಅವರ ಹೆಸರು ಕೇಳಿ ಬರುತ್ತಿದೆ. ಜಯಶ್ರೀ ಅವರು ಮೊದಲ ಬಾರಿಗೆ ಪುರಸಭಾ ಸದಸ್ಯರಾಗಿ ಆಯ್ಕೆಗೊಂಡವರು.

 ನಾಗರಾಜ್ ಪೂಜಾರಿ ಅವರು ಎರಡನೇ ಅವಧಿಯಲ್ಲಿ ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅನುಭವವನ್ನು ಹೊಂದಿದವರು.

ಬಿಜೆಪಿಗೆ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಸಂಸದ ಬ್ರಿಜೇಶ್ ಚೌಟ ಅವರ ಮತವೂ ದೊರೆಯಲಿದೆ.

ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂಬುದಾಗಿ ಪುರಸಭಾ ಸದಸ್ಯ, ಕಾಂಗ್ರೆಸ್ ನಗರಾಧ್ಯಕ್ಷ ಪುರಂದರ ದೇವಾಡಿಗ ತಿಳಿಸಿದ್ದಾರೆ.

Post a Comment

0 Comments