ರಾಜ್ಯದ ರೈತರಿಗೆ ಕೇಂದ್ರದಿಂದ ಸಿಹಿಸುದ್ಧಿ-ಸಂಸದ ಕೋಟ ಮನವಿಗೆ ಕೇಂದ್ರ ಸಚಿವರ ಒಪ್ಪಿಗೆ,ಆದೇಶ

ಜಾಹೀರಾತು/Advertisment
ಜಾಹೀರಾತು/Advertisment

 ರಾಜ್ಯದ ರೈತರಿಗೆ ಕೇಂದ್ರದಿಂದ ಸಿಹಿಸುದ್ಧಿ-ಸಂಸದ ಕೋಟ ಮನವಿಗೆ ಕೇಂದ್ರ ಸಚಿವರ ಒಪ್ಪಿಗೆ,ಆದೇಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಬೆಳೆ ವಿಮೆ ಯೋಜನೆಯ ಅರ್ಜಿ ಸಲ್ಲಿಕೆ ಅವಧಿ ಜುಲೈ ಅಂತ್ಯದಲ್ಲಿ ಮುಕ್ತಾಯವಾಗಿದ್ದು ಹಲವಾರು ರೈತರು ತಾಂತ್ರಿಕ ದೋಷಗಳು ಹಾಗೂ ವಿವಿಧ ಕಾರಣಗಳಿಂದ ಅರ್ಜಿ ಸಲ್ಲಿಕೆಯ ವಂಚಿತರಾಗಿದ್ದರು.


ಹೀಗಾಗಿ ಬೆಳೆವಿಮೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸುವಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಇತ್ತೀಚೆಗೆ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ರವರ ಬಳಿ ಮನವಿ ಮಾಡಿದ್ದರು. ಸಂಸದ ಕೋಟ ಮನವಿಯನ್ನು ಪುರಸ್ಕರಿಸಿದ ಸಚಿವರು ಕರ್ನಾಟಕ ರಾಜ್ಯದ ಜನತೆಗೆ ರೈತರಿಗೆ ಆಗಸ್ಟ್ 16ರವರೆಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಸಂಸದರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು ರೈತರು ಹಾಗೂ ರಾಜಕೀಯ ನಾಯಕರು ಸಂಸದರು ಮತ್ತು ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Post a Comment

0 Comments