ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ *2024-25 ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ

ಜಾಹೀರಾತು/Advertisment
ಜಾಹೀರಾತು/Advertisment

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ 

*2024-25 ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದ್ದು 2024-25ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಗೊಳ್ಳಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

  ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್‌ಗೆ ಸಲ್ಲುತ್ತದೆ.


ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ.


ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ 60 2 ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್‌ ಎಲ್‌ ಬಿ ಪದವಿಯನ್ನು 60 ವಿದ್ಯಾರ್ಥಿ ಮಿತಿಯೊಂದಿಗೆ ಈ ವರ್ಷದಿಂದಲೇ ಆರಂಭಿಸುವ ಅನುಮತಿ ದೊರೆತಿದೆ. ಕಾನೂನು ಶಿಕ್ಷಣದಲ್ಲಿ ಉತ್ತಮ ಅನುಭವ ಹೊಂದಿರುವ ಶಿಕ್ಷಕರನ್ನು ಈಗಾಗಲೇ ನೇಮಿಸಿದ್ದು, ಗುಣಾತ್ಮಕವಾದ ಕಾನೂನು ಶಿಕ್ಷಣಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕಟಿಬದ್ಧವಾಗಿದೆ.


ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು 3 ವರ್ಷಗಳ ಎಲ್‌ಎಲ್‌ಬಿ ಪದವಿಗೆ ದಾಖಲಾತಿಗೊಳ್ಳಲು ಅರ್ಹತೆ ಪಡೆಯುತ್ತಾರೆ. ಹಾಗೂ ದ್ವಿತೀಯ ಪಿಯುಸಿಯಲ್ಲಿ ವಾಣಿಜ್ಯ ಅಥವಾ ವಿಜ್ಞಾನ ಶಾಖೆಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಬಿಕಾಮ್ ಎಲ್ಎಲ್‌ಬಿ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ.


ಹೊಸ ಕಾನೂನು ಮಹಾವಿದ್ಯಾಲಯದ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂಡುಬಿದಿರೆ ಹಾಗೂ ರಾಜ್ಯಕ್ಕೆ ಮತ್ತೊಂದು ಕೊಡುಗೆಯನ್ನು ನೀಡಲು ಸನ್ನದ್ಧವಾಗಿದ್ದು,

ವಿಶಾಲವಾದ ಸುಸಜ್ಜಿತ ಕಾನೂನು ಗ್ರಂಥಾಲಯ, ಮೂಟ್ ಕೋರ್ಟ್ ಮತ್ತು ಇತರೆ ఎల్లా ಮೂಲಭೂತ ಸೌಕಯ್ಯಗಳೊಂದಿಗೆ ವಿದ್ಯಾಗಿರಿಯಲ್ಲಿ ಕಾಲೇಜು ಈಗಾಗಲೇ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಪೂರೈಸಿದ ಪದವೀಧರರು ನ್ಯಾಯವಾಧಿಗಳಾಗಿ ಸ್ವಂತ ವೃತ್ತಿ ಆರಂಭಿಸುವುದಲ್ಲದೇ, ವಿವಿಧ ಕಂಪೆನಿಗಳಲ್ಲಿ ಸಲಹೆಗಾರರಾಗಿ, ವ್ಯವಹಾರ ಆಡಳಿತಾಧಿಕಾರಿಗಳಾಗಿ, ನ್ಯಾಯಾಂಗದ ವಿವಿಧ ಹುದ್ದೆಗಳಲ್ಲಿ, ಶಾಸನ ರೂಪಿಸುವ ಪ್ರತಿನಿಧಿಗಳಾಗಿ ವೃತ್ತಿಕೈಗೊಳ್ಳುವ ಅಪಾರ ಅವಕಾಶಗಳಿವೆ. ಸಮಾಜಕಾರ, ಪ್ರತಿಕೋದ್ಯಮ, ಎಂಬಿಎ, ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್, ಸಿಎ, ಸಿಎಸ್ ಪದವೀಧರರು ಕಾನೂನು ಶಿಕ್ಷಣ ಪಡೆದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ನೈಪುಣ್ಯತೆ ಪಡೆಯುವುದರೊಂದಿಗೆ ಹೆಚ್ಚಿನ ಉದ್ಯೋಗದ ಅವಕಾಶಗಳನ್ನು ಪಡೆಯಲು ಸಹಕಾರಿಯಾಗಲಿದೆ.

 ಇದಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದ್ದು ಅದಕ್ಕೂ ಇದು ಸಹಕಾರಿಯಾಗಲಿ ಎಂದು ತಿಳಿಸಿದರು.

  ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್  ಈ ಸಂದರ್ಭದಲ್ಲಿದ್ದರು.

Post a Comment

0 Comments