ಮೂಡುಬಿದಿರೆ: ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ರಕ್ಷದಾನ ಶಿಬಿರ
*60 ಯುನಿಟ್ ರಕ್ತ ಸಂಗ್ರಹ
ಮೂಡುಬಿದಿರೆ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಮುಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ವಿದ್ಯಾಗಿರಿಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆದ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್ ದೀಪ ಬೆಳಗಿಸಿ ರಕ್ತದಾನ ಶಿಬಿರಕ್ಕೆ ಚಾಲನೆಯನ್ನು ನೀಡಿದರು.
ಜಿಲ್ಲಾ ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ ಕುಲಾಲ್, ಯುವ ಮೋರ್ಚಾದ ಅಧ್ಯಕ್ಷ ಕುಮಾರ್ ಪ್ರಸಾದ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಶೆಟ್ಟಿಗಾರ್, ಒಬಿಸಿ ಮೋರ್ಚಾದ ಅಧ್ಯಕ್ಷ ಪ್ರದೀಪ್ ಕುಮಾರ್ ವಾಲ್ಪಾಡಿ, ಉಪಾಧ್ಯಕ್ಷ ಅಶ್ವತ್ಥ್ ಪಣಪಿಲ ಪುರಸಭಾ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ ಪೂಜಾರಿ,ರೈ.ಮೋ.ಪ್ರಧಾನ ಕಾರ್ಯದರ್ಶಿ ರಾಜೇಶ್ ಅಮೀನ್, ಆಳ್ವಾಸ್ ಹೆಲ್ತ್ ಸೆಂಟರ್ ನ ಪಿಆರ್ ಒ ರಾಜೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಭರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಒಟ್ಟು 60 ಯುನಿಟ್ ರಕ್ತವನ್ನು ಸಂಗ್ರಹವಾಗಿದ್ದು ಇದನ್ನು ಆಳ್ವಾಸ್ ಬ್ಲಡ್ ಬ್ಯಾಂಕಿಗೆ ನೀಡಲಾಯಿತು.
0 Comments