ಅಳಿಯೂರಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ
ಮೂಡುಬಿದಿರೆ: ಸರಕಾರಿ ಪ್ರೌಢಶಾಲೆ ಅಳಿಯೂರು ಇಲ್ಲಿ 2024 -25 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು.
ವಾಲ್ಪಾಡಿ ಗ್ರಾ. ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು.
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ನೆಲ್ಲಿಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ," ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಚಾಲಕರಾದ ಲಕ್ಷ್ಮಣ ಸುವರ್ಣ, ವಾಲ್ಪಾಡಿ ಗ್ರಾ.ಪಂಚಾಯತ್ ಸದಸ್ಯ ಶ್ರೀಧರ ಬಂಗೇರ, ಗ್ಯಾರಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷ ಅರುಣ್ ಶೆಟ್ಡಿ,ತಾ.ಪಂ.ಮಾಜಿ ಸದಸ್ಯ
ಶ್ರೀ ರುಕ್ಕಯ್ಯ ಪೂಜಾರಿ,
ಗುತ್ತಿಗೆದಾರ ಸುಕೇಶ್ ಶೆಟ್ಟಿ ಗ
ಉದ್ಯಮಿ ರಾಮನಾಥ್ ಸಾಲಿಯಾನ್,
ದಾನಿ ಆದಿರಾಜ್ ಜೈನ್,
,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಬಿ.ಅಳಿಯೂರು,ತಾಲ್ಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ನವೀನ್ ಆರ್. ಪುತ್ರನ್,
ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಚಿನ್ಮಯಾನಂದ ಮೂರ್ತಿ ಸ್ವಾಗತಿಸಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಹಿರಿಯ ಶಿಕ್ಷಕ ಸುಬ್ರಮಣ್ಯ ವಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮಹಾದೇವ ವಂದಿಸಿದರು.
0 Comments