ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ
ಮೂಡುಬಿದಿರೆ : ಕಳೆದ ಕೆಲವು ದಿನಗಳಿಂದ ಕಲ್ಲಮುಂಡ್ಕೂರು ವ್ಯಾಪ್ತಿಯಲ್ಲಿ ತಿರುಗಾಡಿ ಸಾರ್ವಜನಿಕರಿಗೆ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಕಲ್ಲಮುಂಡ್ಕೂರು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಯೊಂದು ಸುತ್ತಾಡುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಈ ಬಗ್ಗೆ ಪಂಚಾಯತ್ ಸದಸ್ಯ ವಸಂತ್ ಸಹಿತ ಗ್ರಾಮಸ್ಥರು ಮೂಡುಬಿದಿರೆ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದು ಎಸಿಎಪ್ ಪಿ ಶ್ರೀಧರ್ ಹಾಗೂ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ ಅವರ ಮಾರ್ಗದರ್ಶನದಲ್ಲಿ ಕಳಸಬೈಲು ಎಂಬಲ್ಲಿ ಮೂರು ದಿನಗಳ ಹಿಂದೆ ಬೋನನ್ನು ಇಡಲಾಗಿತ್ತು. ಇಂದು ಮುಂಜಾನೆ ವೇಳೆಗೆ ಚಿರತೆ ಬೋನಿಗೆ ಬಿದ್ದಿದೆ.
ಮೂಡುಬಿದಿರೆ ಉಪವಲಯಾರಣ್ಯಾಧಿಕಾರಿ ಮಂಜುನಾಥ ಗಾಣಿಗ, ಗಸ್ತು ಅರಣ್ಯ ಪಾಲಕ ರಾಜೇಶ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಸಹಿತ ಬೋನನ್ನು ಹಿಡಿದುಕೊಂಡು ಬಂದಿದ್ದಾರೆ.
0 Comments