ಮೂಡುಬಿದಿರೆಯಲ್ಲಿ ಕುದಿ ಕಂಬಳಕ್ಕೆ ಚಾಲನೆ
ಮೂಡುಬಿದಿರೆ: ಇಲ್ಲಿನ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಸಮಿತಿಯಿಂದ ಒಂಟಿಕಟ್ಟೆಯ ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 22 ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ನಡೆಯುವ ಕುದಿ ಕಂಬಳವು ಬುಧವಾರ ಆರಂಭಗೊಂಡಿತು.
ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಕುದಿ ಕಂಬಳಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಪುರಸಭಾ ಉಪಾಧ್ಯಕ್ಷ ನಾಗರಾಜ ಫೂಜಾರಿ, ಕಂಬಳ ಸಮಿತಿಯ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು ಮತ್ತಿತರರು ಈ ಸಂದರ್ಭದಲ್ಲಿದ್ದರು.
0 Comments