ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು
ಮೂಡುಬಿದಿರೆ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾಜಿ ಗುಡ್ಡೆ ಬಳಿ ಸೋಮವಾರ ಸಂಜೆ ಮಿನಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ವೇಣೂರು ಗಾಂಧಿನಗರದ ನಿವಾಸಿಗಳಾದ ಸುರೇಶ್ ಆಚಾರ್ಯ, ಮೀನಾಕ್ಷಿ ಆಚಾರ್ಯ, ಸಮೀಕ್ಷಾ(7) ಹಾಗೂ ಸುಶಾಂತ್(2) ಮೃತಪಟ್ಟವರೆಂದು ತಿಳಿದು ಬಂದಿದೆ.
ಪತಿ,ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಒಂದೇ ಬೈಕ್ ನಲ್ಲಿ ಕಾರ್ಕಳದ ಕಡೆಗೆ ಬರುತ್ತಿದ್ದಾಗ ತಿರುವಿನಲ್ಲಿ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಬೈಕ್ ನಲ್ಲಿದ್ದ ನಾಲ್ಕು ಮಂದಿ ಕೂಡಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆನ್ನಲಾಗಿದೆ.
ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 Comments