ಮುನಿರಾಜ ರೆಂಜಾಳಗೆ 'ವೈಬ್ರೆಂಟ್ ಶಿಕ್ಷಣ ಚೇತನ'ಪ್ರಶಸ್ತಿ
ಮೂಡುಬಿದಿರೆ : ಇಲ್ಲಿನ ವೈಬ್ರೆಂಟ್ ಕಾಲೇಜಿನಲ್ಲಿ ಸೋಮವಾರ ನಡೆದ ಗುರುವಂದನೆ ಕಾರ್ಯಕ್ರಮ ನಿವೃತ್ತ ಶಿಕ್ಷಕ ಮುನಿರಾಜ ರೆಂಜಾಳ ಅವರಿಗೆ “ವೈಬ್ರೆಂಟ್ ಶಿಕ್ಷಣ ಚೇತನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ತಾನು ಕೆಳಗಿದ್ದರೂ ಪರವಾಗಿಲ್ಲ ತನ್ನ ವಿದ್ಯಾರ್ಥಿಗಳು ಮಾಡಿದ ಸಾಧನೆಯನ್ನು ತನ್ನ ಸಾಧನೆ ಎಂದು ಸಂಭ್ರಮಿಸುವ ಶಿಕ್ಷಕರನ್ನು ಸದಾ ಕಾಲ ಸ್ಮರಿಸಬೇಕು ಎಂದು ಸಾಹಿತಿ, ನಿವೃತ್ತ ಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.
ಉದ್ಯಮಿ ಶ್ರೀಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳು ತರಗತಿ ಶಿಕ್ಷಣದ ಜತೆಗೆ ಸಾಹಿತ್ಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳಬೇಕಾದರೆ ಶಿಕ್ಷಕರ ಪಾತ್ರ ದೊಡ್ಡದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿ ಶರತ್ ಗೋರೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಎಸ್.ಎನ್.ವೆಂಕಟೇಶ್ ನಾಯಕ್ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ನಿತಿನ್ ಪಿ.ಎಸ್ ಅಭಿನಂದನಾ ಮಾತುಗಳನ್ನಾಡಿ ದರು. ವೇದಿಕೆಯಲ್ಲಿ ವೈಬ್ರೆಂಟ್ ಎಜುಕೇಷನ್ ಮತ್ತು ಚಾರಿಟೆಬಲ್ ಟ್ರಸ್ಟ್ನ ಟ್ರಸ್ಟಿಗಳಾದ ಮೆಹಬೂಬ ಬಾಷಾ, ಸುಭಾಷ್ ಝಾ, ಚಂದ್ರಶೇಖರ ರಾಜೇ ಅರಸ್, ಯೋಗೇಶ್ ಬೆಡೆಕರ್ ಉಪಸ್ಥಿತರಿದ್ದರು. ಉಪನ್ಯಾಸಕಿ ರಾಗಿಣಿ ವಂದಿಸಿದರು. ವಿದ್ಯಾರ್ಥಿನಿ ಅನನ್ಯ ಪ್ರಭು ವಂದಿಸಿದರು.
0 Comments