ಶ್ರೀ ಮಹಾವೀರ ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಜಾಹೀರಾತು/Advertisment
ಜಾಹೀರಾತು/Advertisment

 ಶ್ರೀ ಮಹಾವೀರ ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ. ಪ.ಪೂ.ಶಿಕ್ಷಣ ಇಲಾಖೆ ಮತ್ತು ಶ್ರೀ ಮಹಾವೀರ ಜಾಲೇಜಿನಲ್ಲಿ ಆಶ್ರಯದಲ್ಲಿ ತಾಲೂಕು ಮಟ್ಟದ ತ್ರೋಬಾಲ್‌ ಪಂದ್ಯಾಟವು ಕಾಲೇಜಿನ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು.


ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ಅಧ್ಯಕ್ಷ ಬಿ.ಸೀತಾರಾಮ ಆಚಾರ್ಯ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಆಸ್ಟ್ರೇಲಿಯಾ ಮತ್ತು ಅಮೇರಿಕಾದಲ್ಲಿ ಮಹಿಳೆಯರಿಗಾಗಿ ಈ ತ್ರೋಬಾಲ್ ಕ್ರೀಡೆಯನ್ನು ಜಾರಿಗೆ ತರಲಾಗಿದ್ದು ಬೇರೆ ಬೇರೆ ಹಲವಾರು ದೇಶಗಳಲ್ಲಿ ಈ ಕ್ರೀಡೆಯನ್ನು ಇಷ್ಟಪಟ್ಟು ಆಡುತ್ತಾರೆ ಭಾರತದಲ್ಲಿಯೂ ಈ ಕ್ರೀಡೆಗೆ ಹೆಚ್ಚಿನ ಪ್ರಾಶಸ್ಯವಿದೆ. 


ಕಲಿಕೆಯ ಜೊತೆಗೆ ತಮ್ಮ ದೈಹಿಕ ಆರೋಗ್ಯ ಮತ್ತು ಸಾಮಥ್ಯ ೯ ವನ್ನು ಹೆಚ್ಚಿಸಿಕೊಳ್ಳಲು ಸಹಕಾರಿ ಮಾತ್ರವಲ್ಲದೆ  ತಾವು ಕ್ರೀಡೆಯಲ್ಲಿ ತೊಡಗಿಸಿಕೊಂಡು ಹೆಚ್ಚಿನ ಸಾಧನೆ ಮಾಡಿದಾಗ ಉದ್ಯೋಗದ ಅವಕಾಶಗಳು ಸಿಗುತ್ತವೆ ಎಂದ ಅವರು ಯಾವುದೇ ಕ್ಷೇತ್ರದಲ್ಲಿಯೂ ಸೋಲು ಗೆಲುವು ಇದ್ದೇ ಇದೆ ಅದ್ದರಿಂದ ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ಎಂದು ಸಲಹೆ ನೀಡಿದರು.

  ಪ.ಪೂ.ಕಾಲೇಜಿನ ಪ್ರಾಂಶುಪಾಲ ಡಾ.ರಮೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು.

  ಕಾಲೇಜಿನ ಹಳೆ ವಿದ್ಯಾರ್ಥಿ ಲ/ರೋಹನ್ ಖರ್ಡೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಶುಭ ಹಾರೈಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಮತ್ತು ತಾಲೂಕು ಕ್ರೀಡಾ ಸಂಯೋಜಕ  ನವೀನ್ ಹೆಗ್ಡೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್  ಗೌರವ ಉಪಸ್ಥಿತರಿದ್ದರು.

  ಉಪನ್ಯಾಸಕಿ ವಿಜಯಲಕ್ಷ್ಮೀ ಮಾರ್ಲ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈ.ಶಿ.ಉಪನ್ಯಾಸಕ ಅಕ್ಷಿತ್ ವಂದಿಸಿದರು.

Post a Comment

0 Comments