ಪಾಲಡ್ಕದಲ್ಲಿ "ಸ್ವಚ್ಛತಾ ಹೀ ಸೇವಾ" ಆಂದೋಲನ

 ಪಾಲಡ್ಕದಲ್ಲಿ "ಸ್ವಚ್ಛತಾ ಹೀ ಸೇವಾ" ಆಂದೋಲನ

ಮೂಡುಬಿದಿರೆ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ *"ಸ್ವಚ್ಛತಾ ಹೀ ಸೇವಾ"*  ಆಂದೋಲನ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ *"ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ"* ಅಭಿಯಾನದಡಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ಹಮ್ಮಿಕೊಳ್ಳಲಾಯಿತು.  

 ಸ್ವಚ್ಚತೆಗೆ ಸಂಬಂಧಿಸಿದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಅಮಿತಾ, ಉಪಾಧ್ಯಕ್ಷ ಪ್ರವೀಣ್ ಸಿಕ್ವೇರಾ, ಪಂಚಾಯತ್ ಸದಸ್ಯರಾದ ಸುಕೇಶ್ ಶೆಟ್ಟಿ, ಹರಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಕ್ಷಿತಾ ಡಿ., ದ್ವಿತೀಯ ದರ್ಜೆ ಲೆಕ್ಕಸಹಾಯಕರಾದ ಮೋಹಿನಿ, ತಾಲೂಕು ಐಇಸಿ ಸಂಯೋಜಕರಾದ ಅನ್ವಯ, ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು,ಪ್ರಾಥಮಿಕ ಆರೋಗ್ಯ‌ಕೇಂದ್ರದ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟ ದ ಸದಸ್ಯರು ಉಪಸ್ಥಿತರಿದ್ದರು.

Post a Comment

0 Comments

Advertisement