ಕೋಟ ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆ:ಗೆಲ್ಲುವ ಕುದುರೆ ಬಿಜೆಪಿಯಲ್ಲಿ ಫೈಟ್ ಜೋರು
ವಿಧಾನ ಪರಿಷತ್ ಮರು ಚುನಾವಣೆ ಘೋಷಣೆ ಆಗುತ್ತಲೇ ಟಿಕೆಟ್ ಆಕಾಂಕ್ಷಿಗಳಲ್ಲಿ ಉತ್ಸಾಹ ಹೆಚ್ಚಾಗಿದೆ. ಈ ನಡುವೆ ಭಾರತೀಯ ಜನತಾ ಪಾರ್ಟಿಯಲ್ಲಿ ಹಲವಾರು ಆಕಾಂಕ್ಷಿಗಳು ತಮ್ಮ ಆಕಾಂಕ್ಷೆಗಳನ್ನು ವ್ಯಕ್ತಪಡಿಸಿದ್ದು ಹೈಕಮಾಂಡ್ ಯಾರಿಗೆ ಜೈ ಎನ್ನುತ್ತಾರೆ ಎಂಬ ಕುತೂಹಲ ಕೆರಳಿಸಿದೆ.
ಈಗಾಗಲೇ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಸಂಸದರು ಹಾಗೂ ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲು, ವಿಭಾಗ ಪ್ರಭಾರಿ ಉಡುಪಿಯ ಉದಯಕುಮಾರ್ ಶೆಟ್ಟಿ ಕಿದಿಯೂರು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಹಾಗೂ ಮಾಜಿ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮತ್ತಿತರರು ವಿಧಾನಪರಿಷತ್ ಚುನಾವಣೆಯ ಆಕಾಂಕ್ಷಿಗಳಾಗಿದ್ದಾರೆ.
ಈ ಪೈಕಿ ನಳಿನ್ ಕುಮಾರ್ ಕಟೀಲು, ಪ್ರಮೋದ್ ಮಧ್ವರಾಜ್ ಮತ್ತು ಸತೀಶ್ ಕುಂಪಲ ರವರ ಹೆಸರು ಮುಂಚೂಣಿಯಲ್ಲಿದೆ ಎಂದು ಬಲ್ಲ ಮೂಲಗಳ ಮಾಹಿತಿಯಾಗಿದೆ.
ಇತ್ತೀಚೆಗೆ ಚುನಾವಣಾ ಉಸ್ತುವಾರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಪ್ರೀತಮ್ ಗೌಡ ಮಂಗಳೂರಿಗೆ ಆಗಮಿಸಿ ಪ್ರಮುಖರ ಅಭಿಪ್ರಾಯ ಪಡೆದುಕೊಂಡಿದ್ದು ಚೆಂಡು ಹೈಕಮಾಂಡ್ ಅಂಗಳದಲ್ಲಿದೆ.
0 Comments