ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಮೂಡುಬಿದಿರೆಯ ಫಾತಿಮಾ ಶೈಫಾರಿಗೆ ಬೆಳ್ಳಿ ಹಾಗೂ ಕಂಚಿನ ಪದಕ
ಮೂಡುಬಿದಿರೆ:ಮಂಗಳೂರಿನ ಶೌರ್ಯ ಹಾಗೂ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಸಂಸ್ಥೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫಾತಿಮಾ ಶೈಫಾ ಅವರು ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕಟ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಶೈಫಾ ಅವರು ಮೂಡುಬಿದಿರೆಯ ರೆನ್ಶಿ ಮುಹಮ್ಮದ್ ನದೀಮ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
0 Comments