ಭಾಷಾಭಿಮಾನದ ಮೂಲಕ ಬದುಕನ್ನು ಕಟ್ಟಿಕೊಳ್ಳೋಣ: ಡಾ.ಪುಂಡಿಕಾಯಿ ಗಣಪಯ್ಯ ಭಟ್*

ಜಾಹೀರಾತು/Advertisment
ಜಾಹೀರಾತು/Advertisment

 *ಭಾಷಾಭಿಮಾನದ ಮೂಲಕ ಬದುಕನ್ನು ಕಟ್ಟಿಕೊಳ್ಳೋಣ: ಡಾ.ಪುಂಡಿಕಾಯಿ ಗಣಪಯ್ಯ ಭಟ್*


ಸುಸಂಸ್ಕೃತ ಜೀವನ ಪದ್ಧತಿಯನ್ನು ನಾವು ಬದುಕಿನಲ್ಲಿ ರೂಡಿಸಿಕೊಳ್ಳಬೇಕು. ಶಿಕ್ಷಣವು ಜ್ಞಾನ ನೀಡುವುದರ ಜೊತೆಯಲ್ಲಿ ಬದುಕುವ ಕಲೆಯನ್ನು ಕಲಿಸುತ್ತದೆ. ಆಧುನಿಕ ಜಗತ್ತಿನ ಸವಾಲುಗಳ ಸುಳಿಯಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕನ್ನಡ ಭಾಷಾಭಿಮಾನವನ್ನು ಬೆಳೆಸಿಕೊಳ್ಳುವುದರ ಮೂಲಕ ನಮ್ಮ ನಡೆ ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬಹುದು,ಬೆಳೆಸಿಕೊಳ್ಳಬಹುದು. ಆ ನಿಟ್ಟಿನಲ್ಲಿ ನಮ್ಮ ಅಧ್ಯಯನದ ಜೊತೆಯಲ್ಲಿ ಭಾಷಾಭಿಮಾನವನ್ನು ರೂಡಿಸಿಕೊಳ್ಳೋಣ ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ.

 ಪುಂಡಿ ಕಾಯಿ ಗಣಪಯ್ಯ ಭಟ್ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.



ಅವರು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಆಶ್ರಯದಲ್ಲಿ ಮೂಡುಬಿದಿರೆ ರೋಟರಿ ಪದವಿ ಪೂರ್ವಕಾಲೇಜಿನಲ್ಲಿನಡೆದ ಕನ್ನಡ ಚಿಂತನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. 


ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊಫೆಸರ್ ವೇಣುಗೋಪಾಲ ಶೆಟ್ಟಿ ಅವರು ದೀಪ ಬೆಳಗುವುದರ ಹೋಬಳಿ ಕನ್ನಡಸಾಹಿತ್ಯ ಪರಿಷತ್ತಿನ ಕನ್ನಡ ಚಿಂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಭಾಷೆ ಮತ್ತು ಸಾಹಿತ್ಯದ ಹಿರಿಮೆಯನ್ನು ಕುರಿತು ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ತಿಳುವಳಿಕೆ ನೀಡಿದರು.

ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರು. 

ರೋಟರಿ ವಿದ್ಯಾಸಂಸ್ಥೆಯ ಖಜಾಂಚಿ ಶ್ರೀ ರತ್ನಾಕರ ಜೈನ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಭಾಷೆಯ ಪ್ರಾಮುಖ್ಯತೆಯನ್ನು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರೊಟೇರಿಯನ್ ಮೋಹನ್ ಭಟ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. 

ರೋಟರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿಕುಮಾರ್ ಅವರು ಎಲ್ಲರನ್ನು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಯೋಗಿತಅವರು ಧನ್ಯವಾದ ಸಲ್ಲಿಸಿದರು.

ಕನ್ನಡ ಉಪನ್ಯಾಸಕಿ ಶ್ರೀಮತಿ ಮಾಲತಿ ಅವರು ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments