ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಮೂಡುಬಿದಿರೆ: ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮೂಡುಬಿದಿರೆ ವಲಯ ಇವುಗಳ ವತಿಯಿಂದ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಶುಕ್ರವಾರ ಜರಗಿತು.
ಮೂಡುಬಿದಿರೆ ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮೂಡುಬಿದಿರೆ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ, ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ.ವಿ ಕಾಲೇಜು ಉಪನ್ಯಾಸಕ ಡಾ. ಪ್ರಭಾಕರ್ ಉಪಯುಕ್ತ ಮಾಹಿತಿ
ನೀಡಿದರು. ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ಬೊನವೆಂಚರ್ ಮಿನೇಜಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುನೀತಾ ನಾಯ್ಕ್,
ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರುಗಳಾದ ಶಶಿಧರ ಕೋಟ್ಯಾನ್ ಕಲ್ಲಬೆಟ್ಟು, ಅರುಣ್ ಶೆಟ್ಟಿ ಮೂಡುಬಿದಿರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸೇವಾ ಪ್ರತಿನಿಧಿ
ಅನಿತಾ ಬಲ್ಲಾಳ್ ಸ್ವಾಗತಿಸಿದರು. ಯೋಜನೆಯ ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.
ಶಾಲೆಯ ಪ್ರಾಂಶುಪಾಲ ಸಂಗಮೇಶ್ ಹಿರೇಮಠ ವಂದಿಸಿದರು.
0 Comments