ಕಟ್ಟಡದಿಂದ ಅಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಸಾವು
ಮೂಡುಬಿದಿರೆ: ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕ ಅಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಸಾಂಬಾಲ್ ಜಿಲ್ಲೆಯ ರಾಯೀಸ್ ಅಹಮ್ಮದ್ ಎಂಬವರ ಪುತ್ರ ಸಮೀರ್ (19) ಮೃತಪಟ್ಟ ಯುವಕ.
ಸಮೀರ್ ಕಳೆದ ಎರಡು ತಿಂಗಳ ಹಿಂದೆ ಆಳ್ವಾಸ್ ಸಂಸ್ಥೆಗೆ ವೆಲ್ಡಿಂಗ್ ಕೆಲಸಕ್ಕೆ ಸೇರಿಕೊಂಡಿದ್ದು ಮಂಗಳವಾರ ಶಾಂಭವಿ ಹಾಸ್ಟೆಲ್ ನ 5ನೇ ಮಹಡಿಯ ರೋಪ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಕಾಲುಜಾರಿ ಕೆಳಗೆ ಬಿದ್ದಿದ್ದು ಈ ಸಂದರ್ಭ ತಲೆ ಮತ್ತು ಕಾಲಿಗೆ ತೀವೃ ತರಹದ ಗಾಯಗಳಾಗಿ ಅಧಿಕ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 Comments