ಮೂಡುಬಿದಿರೆ: ಗಣೇಶೋತ್ಸವ ಸಮಾರೋಪದಲ್ಲಿ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ಗೆ ಸಮ್ಮಾನ
ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ಮೂಡುಬಿದಿರೆ ಇದರ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ಐದು ದಿನಗಳ ಕಾಲ ನಡೆದ 61ನೇ ವರ್ಷದ ಮೂಡುಬಿದಿರೆ ಶ್ರೀ ಗಣೇಶೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿಗಳ ಪದಕದ ಗೌರವಕ್ಕೆ ಪಾತ್ರರಾಗಿರುವ ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ.ಅವರನ್ನು ಸನ್ಮಾನಿಸಲಾಯಿತು.
ಟ್ರಸ್ಟ್ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ವಿದ್ವಾಂಸ ಕೊಲಕಾಡಿ ವಾದಿರಾಜ ಉಪಾಧ್ಯಾಯ ಧಾರ್ಮಿಕ ಉಪನ್ಯಾಸ ನೀಡಿದರು. ಆಕಾಶವಾಣಿ ಆಹ್ವಾನಿತ ಕಲಾವಿದೆ, ವಕೀಲೆ ಡಾ.ಅಕ್ಷತಾ ಆದರ್ಶ ಉಪನ್ಯಾಸ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪುರಸಭೆ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ರೋಟರಿ ಅಧ್ಯಕ್ಷ ರವಿ ಪ್ರಸಾದ್ ಉಪಾಧ್ಯಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ.ಎಂ, ಉಪಾಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಕ್ರೀಡಾ ಸಂಚಾಲಕ ಗೋಪಾಲ್ ಎಂ, ಸಮಿತಿ ಸದಸ್ಯ ಪ್ರಸನ್ನ ಶೆಣೈ, ಪ್ರಶಾಂತ್ ಭಂಡಾರಿ, ಸಾಂಸ್ಕೃತಿಕ ಸಂಚಾಲಕ ಯತಿರಾಜ್ ಶೆಟ್ಟಿ ಮತ್ತು ಚೇತನ್ ಕುಮಾರ್ ಶೆಟ್ಟಿ ಈ ಸಂದರ್ಭದಲ್ಲಿದ್ದರು.
0 Comments