ಮೈತ್ರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ *ಸೈಬರ್ ಕ್ರೈಂ ಬಗ್ಗೆ ಮಾಹಿತಿ

ಜಾಹೀರಾತು/Advertisment
ಜಾಹೀರಾತು/Advertisment

 ಮೈತ್ರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ 

*ಸೈಬರ್ ಕ್ರೈಂ ಬಗ್ಗೆ ಮಾಹಿತಿ

ಮೂಡುಬಿದಿರೆ: ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಮೂಡುಬಿದಿರೆ ಇದರ ಕೊಡಂಗಲ್ಲು ಒಕ್ಕೂಟದ ಮೈತ್ರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಸೈಬರ್ ಕ್ರೈಂ ಬಗ್ಗೆ ಮಾಹಿತಿ ಕಾರ್ಯಕ್ರಮ ಭಾನುವಾರ ಶ್ರೀ ಮಹಾವೀರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

  ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರವು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆಗೆ ಮಾತ್ರ ಸೀಮಿತವಾಗದೆ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಮತ್ತು ಆಕೆಗೆ ಸಾಮಾಜಿಕವಾಗಿ ದೈರ್ಯ ತುಂಬುವಲ್ಲಿಯೂ ಸಹಕಾರಿಯಾಗಿದೆ ಎಂದರು.


  ಪುರಸಭಾ ಸದಸ್ಯ ಕೊರಗಪ್ಪ ಅಧ್ಯಕ್ಷತೆ ವಹಿಸಿ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ವಸಹಾಯ ಸಂಘಗಳಿಂದ ಮಹಿಳೆಯರಿಗೆ ಆಗುವ ಉಪಯೋಗಗಳ ಬಗ್ಗೆ ವಿವರಿಸಿದರು.

  ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕ ಸಿದ್ದಪ್ಪ ನರನೂರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ  "ಸೈಬರ್ ಕ್ರೈಂ" ಬಗ್ಗೆ ಮಾಹಿತಿ ನೀಡಿ ಮಾತನಾಡಿದ  ಅವರು ಬ್ಯಾಂಕಿನವರೆಂದು ಕರೆ ಮಾಡಿ ನಿಮ್ಮ ಬ್ಯಾಂಕ್ ಖಾತೆಯ ಒಟಿಪಿ ನಂಬರನ್ನು ಕೇಳಿದರೆ ಯಾರಿಗೂ ನೀಡಿ ಖಾತೆಯಲ್ಲಿರುವ ಹಣವನ್ನು ಕಳೆದು ಕೊಳ್ಳಬೇಡಿ ಮತ್ತು ಹಣ ಮಾಡುವ ಧಾವಾಂತದಲ್ಲಿ  ನಿಮ್ಮ ಹಣವನ್ನು ಕಳೆದುಕೊಳ್ಳಬೇಡಿ, ಆಪ್ ಮೂಲಕ ಸಾಲ ತೆಗೆಯಬೇಡಿ, ಮೊಬೈಲ್ ಸ್ಟೇಟಸ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಗೆ ನಿಮ್ಮ ಫೋಟೋವನ್ನು ಹಾಕುವಾಗ ಜಾಗರೂಕರಾಗಿ ಎಂದು ಸಲಹೆ ನೀಡಿದರು.


  ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುನೀತಾ ನಾಯ್ಕ್, ಮೇಲ್ವೀಚಾರಕ ವಿಠಲ್, ಕೊಡಂಗಲ್ಲು ಒಕ್ಕೂಟದ ಅಧ್ಯಕ್ಷೆ ಪ್ರೇಮಶ್ರೀ ಕಲ್ಲಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 


  ಸೇವಾ ಪ್ರತಿನಿಧಿ ಮಮತಾ ಸ್ವಾಗತಿಸಿದರು. ಜ್ಞಾನ ವಿಕಾಸ  ತಾಲೂಕು ಸಮನ್ವಯಾಧಿಕಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

 ನಂತರ "ಮೈತ್ರಿ" ಜ್ಞಾನ ವಿಕಾಸ ಕೇಂದ್ರದ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಂಡಿತು.

Post a Comment

0 Comments