35ನೇ ವರ್ಷದ ಶ್ರೀ ಶಾರದೆಯ ವೈಭವದ ಶೋಭಾಯಾತ್ರೆ

ಜಾಹೀರಾತು/Advertisment
ಜಾಹೀರಾತು/Advertisment

 35ನೇ ವರ್ಷದ ಶ್ರೀ ಶಾರದೆಯ ವೈಭವದ ಶೋಭಾಯಾತ್ರೆ

ಮೂಡುಬಿದಿರೆ: ಶ್ರೀ ವೀರಮಾರುತಿ ಸೇವಾ ಟ್ರಸ್ಟ್ (ರಿ) ಮೂಡುಬಿದಿರೆ ಇದರ ವತಿಯಿಂದ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲ ನಡೆದ 35ನೇ ವರ್ಷದ ಮೂಡುಬಿದಿರೆ ಶ್ರೀ ಶಾರದಾ ಮಹೋತ್ಸವವು ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯೊಂದಿಗೆ ನಡೆದು ಶುಕ್ರವಾರ ಸಂಜೆ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆಯು ನಡೆಯಿತು.

  ಶೋಭಾಯಾತ್ರೆಯು ವಿವಿಧ ಸಾಂಸ್ಕೃತಿಕ ತಂಡಗಳು, ಭಜನಾ ತಂಡಗಳೊಂದಿಗೆ ಕಲಾ ಮಂದಿರದಿಂದ ಹೊರಟು ಮೂಡುಬಿದಿರೆಯ ಮುಖ್ಯರಸ್ತೆಯಲ್ಲಿ ಸಾಗಿ ಆಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ   'ಮಾನಸ  ಗಂಗೋತ್ರಿ ಸರೋವರ'ದಲ್ಲಿ ಶ್ರೀ ಶಾರದಾ ದೇವಿಯ ವಿಗ್ರಹವನ್ನು ಜಲಸ್ತಂಭನಗೊಳಿಸಲಾಯಿತು.

Post a Comment

0 Comments