ಮೂಡುಬಿದಿರೆ: ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ತೆಂಕಮಿಜಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧೀಜಿ ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಸ್ವಚ್ಛತಾಹಿ ಆದೋಲನದ ಸಮಾರೋಪ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸ್ವಚ್ಛತಾ ಸಿಬ್ಬಂದಿಗಳನ್ನು ಗೌರವಿಸಲಾಯಿತು ಮತ್ತು ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಹಾಗೂ ಇತ್ತೀಚೆಗೆ ನಿಧನರಾಗಿರುವ ಸ್ವಚ್ಛತಾ ಕಾರ್ಮಿಕನೋರ್ವರ ಪತ್ನಿಗೆ ಧನಸಹಾಯವನ್ನು ನೀಡಲಾಯಿತು.
ನಂತರ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ, ಪಂಚಾಯತ್ ಸದಸ್ಯರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
0 Comments