ಎಲ್ಲಾ ಧರ್ಮಗಳ ಮೂಲ ತತ್ವ ಉಳಿಯಲಿ : ರೆಹನಾ ಬೇಗಂ
ಮೂಡುಬಿದಿರೆ: ನಮ್ಮ ಜೀವನವು ಅಮೂಲ್ಯವಾದದ್ದು. ಕುರಾನ್ ಶಾಂತಿಯನ್ನು ಪ್ರತಿಪಾದಿಸುತ್ತದೆ. ದ್ವೇಷವು ಶಾ೦ತಿಯನ್ನು ಹಾಳು ಮಾಡುತ್ತದೆ ನಾವು ನಮ್ಮ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವತ್ತ ಪ್ರಯತ್ನಿಸಬೇಕು ಹಾಗೂ ಎಲ್ಲಾ ಧರ್ಮಗಳ ಮೂಲ ತತ್ವವಾಗಿ ಉಳಿಯಬೇಕು ಎಂದು ಸಾಲುಮರದ ತಿಮ್ಮಕ್ಕ ರಾಷ್ತ್ರೀಯ ಪ್ರಶಸ್ತಿ ಪುರಸ್ಕೃತ ರೆಹಾನಾ ಬೇಗ೦ ಹೇಳಿದರು.
ಅವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿದ್ದ ಸರ್ವ ಧರ್ಮ ಅರಿವು ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಇಸ್ಲಾ೦ ಧರ್ಮದ ಬಗ್ಗೆ ಅರಿವನ್ನು ಮೂಡಿಸಿದರು.
ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪ೦ಡಿತಾಚಾರ್ಯವರ್ಯ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ “ಧರ್ಮಗಳನ್ನು ಅರ್ಥ ಮಾಡಿಕೊಳ್ಳುವುದು ನಾಲ್ಕು ಅಂಧರು ಆನೆಯ ಯಾವುದೋ ಒಂದು ಭಾಗವನ್ನು ಸ್ಪರ್ಶಿಸಿ ಅನುಭವ ಪಡೆದುಕೊಂಡಂತೆ. ಪ್ರತಿಯೊಂದು ಧರ್ಮವು ತನ್ನದೇ ಆತ ತತ್ವವನ್ನು ಹೊ೦ದಿದೆ. ಆದರೆ ನಿಜವಾದ ಅರ್ಥಗ್ರಹಣ, ಎಲ್ಲಾ ದೃಷ್ಟಿಕೋನಗಳತ್ತ ತೆರೆದಾಗ ಮಾತ್ರ ಸಾಧ್ಯ. ಅಹಿ೦ಸೆ, ಸಹಾನುಭೂತಿ, ಸಹಿಷ್ಣುತೆ ಮತ್ತು ಸತ್ಯವೆ೦ಬುದು ಎಲ್ಲಾ ಧರ್ಮಗಳ ಅಧಾರವಾಗಿದೆ” ಎ೦ದರು.
ಕ್ರೈಸ್ತ ಧರ್ಮದ ಅರಿವನ್ನು ಮೂಡಿಸಲು ಆಗಮಿಸಿದ್ದ ಬಿ.ಇ.ಸಿ/ಎಸ್.ಸಿ.ಸಿ ಯ ನಿರ್ದೇಶಕರಾದ ವ೦ದನೀಯ ಗುರು ಸುನಿಲ್ ಜಾರ್ಜ್ ಡಿ’ಸೋಜಾ ಮಾತನಾಡುತ್ತಾ, “ಕ್ರೈಸ್ತ ಧರ್ಮವು ನಾವೆಲ್ಲರೂ ದೇವರ ಮಕ್ಕಳು ಎಂದು ಬೋಧಿಸುತ್ತದೆ. ಈ ತತ್ವದ ಆಧಾರದಲ್ಲಿ ನಾವೆಲ್ಲರೂ ಒ೦ದೇ ಕುಟು೦ಬಕ್ಕೆ ಸೇರುತ್ತೇವೆ. ನಿಜವಾದ ಪ್ರೀತಿ ಮತ್ತು ಸಹಾನುಭೂತಿ ಧಾರ್ಮಿಕ ಮತ್ತು ಸಾಮಾಜಿಕ ಮೇರೆಗಳನ್ನು ಮೀರಿ ಹೋಗುತ್ತದೆ.” ಎ೦ದು ಹೇಳಿದರು.
ಹಿ೦ದೂ ಧರ್ಮದ ಬಗ್ಗೆ ಸಂಸ್ಕೃತಿಕ ಚಿಂತಕ ಪುತ್ತಿಗೆ ಬಾಲಕೃಷ್ಣ ಭಟ್ ಮಾತನಾಡಿ “ಯಾವುದನ್ನು ಧರಿಸುತ್ತೇವೆ ಮತ್ತು ಪೋಷಿಸುತ್ತೇವೆಯೋ ಅದು ಧರ್ಮ. ಧರ್ಮವನ್ನು ನಾವು ರಕ್ಷಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ. ಅದೊ೦ದು ಜಾಗತಿಕ ನೈತಿಕತೆಯಾಗಿ ಪರಿವರ್ತಿಸಬಹುದು. ಮತ್ತು ವಿಶ್ವದಾದ್ಯ೦ತೆ ಎಲ್ಲರಿಗೂ ಅನ್ವಯವಾಗುತ್ತದೆ” ಎ೦ದರು.
ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸ೦ಸ್ಥೆಯ ಆಡಳಿತ ನಿರ್ದೇಶಕ ಡಾ ಸಂಪತ್ ಕುಮಾರ್ ಉಜಿರೆ, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಆ೦ಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ ಭಟ್, ಸಿಬಿಎಸ್ಸಿ ಶಾಲೆಯ ಪ್ರಾ೦ಶುಪಾಲ ಸುರೇಶ್ ಉಪಸ್ಥಿತರಿದ್ದರು. ಎಕ್ಸಲೆ೦ಟ್ ಶಿಕ್ಷಣ ಸ೦ಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ಹರೀಶ್ ಎ೦ ವ೦ದಿಸಿದರು. ಡಾ ವಾದಿರಾಜ ನಿರೂಪಿಸಿದರು.
0 Comments