ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧ ವಿತರಣೆ
ಮೂಡುಬಿದಿರೆ: ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ಸ್ನಾತಕೋತ್ತರ ವಿಭಾಗ ಮತ್ತು ಬಂಟರ ಮಹಿಳಾ ಘಟಕ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸ್ತ್ರೀ ರೋಗ ಮತ್ತು ಪರಿಹಾರಗಳು ಎಂಬ ಬಗ್ಗೆ ಮಾಹಿತಿ ಶಿಬಿರ, ವೈದ್ಯಕೀಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣಾ ಕಾರ್ಯಕ್ರಮವು ಕನ್ನಡ ಭವನದಲ್ಲಿ ನಡೆಯಿತು.
ಆಳ್ವಾಸ್ ಎಜುಕೇಶನ್ ಫೌಂಡೇಶನ್ ಟ್ರಸ್ಟಿ ಹಾಗು ಸ್ತ್ರೀ ರೋಗ ತಜ್ಞೆ ಡಾ.ಹನಾ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಮಹಿಳೆ ತನ್ನ ಆರೋಗ್ಯದ ಬಗ್ಗೆ ಕಾಳಜಿಯನ್ನ ವಹಿಸಿ ತನ್ನ ಆರೋಗ್ಯವನ್ನು ಕಾಪಾಡಿಕೊಂಡು ಬರುವುದರಿಂದ ಇಡೀ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬಹುದು. ಆರೋಗ್ಯದ ಬಗ್ಗೆ ಅಜಾಗ್ರತೆಯನ್ನು ಮಾಡಿ ಮುಂದೆ ಆಗಬಹುದಾದ ಅನಾಹುತಗಳಿಗೆ ಎಡೆ ಮಾಡಿಕೊಡಬಾರದು, ವೈದ್ಯರ ಸಲಹೆಯನ್ನು ಪಡೆದುಕೊಳ್ಳಬೇಕು ಎಂದು ಮಾಹಿತಿಯನ್ನು ನೀಡಿದರು. ಅನಾರೋಗ್ಯಗಳನ್ನು ಗುಟ್ಟಿನಲ್ಲಿ ಇಡುವುದರಿಂದಾಗಿ ಮುಂದೆ ಆಗಬಹುದಾದ ಅನಾಹುತಗಳಿಗೆ ನಾವೇ ಕಾರಣ ರಾಗುತ್ತೇವೆ ಎಂದು ಕಿವಿ ಮಾತನ್ನು ಹೇಳಿದರು.
ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಸುರೇಖಾ ಪೈ , ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್.ಹೆಗ್ಡೆ, ಆಸ್ಪತ್ರೆಯ ವೈದ್ಯರಾದ ಡಾ. ಕವಿತಾ ಬಿ.ಕೆ ಮತ್ತು
ಡಾಕ್ಟರ್ ಮಾನಸಿ ಪಿ. ಎಸ್. ಉಪಸ್ಥಿತರಿದ್ದರು.
ಶಿಬಿರದಲ್ಲಿ 53 ಜನ ಮಹಿಳೆಯರಿ ಗೆ ಉಚಿತ ತಪಾಸಣೆ ಹಾಗೂ ಔಷಧಿಯನ್ನು ವಿತರಿಸಲಾಯಿತು.
ಸಭಾ ಹರಿಣಾಕ್ಷಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ.ಸುರೇಖಾ ಪೈ ವಂದಿಸಿದರು.
0 Comments