ಇಂದು ಮೂಡುಬಿದಿರೆಯಲ್ಲಿ ಹೈಟೆಕ್ ಮಾದರಿಯ ವೇಟ್ ಲಿಫ್ಟಿಂಗ್ ತರಬೇತಿ ಕೇಂದ್ರ ಲೋಕಾರ್ಪಣೆ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸುಮಾರು 20 ಲಕ್ಷಕ್ಕಿಂತ ಅಧಿಕ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಹೈಟೆಕ್ ಮಾದರಿಯ ವೇಟ್ ಲಿಫ್ಟಿಂಗ್ ತರಬೇತಿ ಕೇಂದ್ರವು (ಅ. 14 ) ಇಂದು ಲೋಕಾರ್ಪಣೆಗೊಳ್ಳಲಿದೆ.
ದಿವಂಗತ ಲೋಕನಾಥ ಬೋಳಾರ್ ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ತರಬೇತಿ ಕೇಂದ್ರವನ್ನು ಒಲಿಂಪಿಯನ್, ಅಂತರ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಷಿಪ್ ಗೆ ದೇಶವನ್ನು ಪ್ರತಿನಿಧಿಸಿದ, 34 ಬಾರಿ ರಾಷ್ಟ್ರ ಮಟ್ಟದಲ್ಲಿ ದಾಖಲೆ ಬರೆದ ಕ್ರೀಡಾಪಟು ಅರ್ಜುನ ಪ್ರಶಸ್ತಿ ಪುರಸ್ಕೃತ ಸತೀಶ್ ರೈ ಅವರು ವೇಟ್ ಲಿಫ್ಟಿಂಗ್ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ದಿವಂಗತ ಲೋಕನಾಥ ಬೋಳಾರ್ ಅವರ ಹೆಸರಿನಲ್ಲಿ ನಿರ್ಮಾಣ ಆಗಿರುವ ವೇಟ್ ಲಿಫ್ಟಿಂಗ್ ತರಬೇತಿ ಕೇಂದ್ರವು ಎಲ್ಲ ಸೌಲಭ್ಯಗಳನ್ನು ಹೊಂದಿದ್ದು, ಏಕಕಾಲದಲ್ಲಿ 50 ಮಂದಿ ವೇಟ್ ಲಿಫ್ಟರ್ ಗಳಿಗೆ ತರಬೇತಿ ನೀಡಬಹುದಾಗಿದೆ. ಹೈಟೆಕ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸುಮಾರು 20 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಲಾಗಿದೆ. ಇದಕ್ಕೆಲ್ಲ ಡಾ. ಮೋಹನ್ ಆಳ್ವ ಅವರ ಸಹಕಾರವೇ ಕಾರಣ ಎಂದು ವೇಟ್ ಲಿಫ್ಟಿಂಗ್ ತರಬೇತುದಾರರಾದ ಪ್ರಮೋದ್ ಶೆಟ್ಟಿ ತಿಳಿಸಿದ್ದಾರೆ.
0 Comments