ಮೂಲ್ಕಿ-ಮೂಡುಬಿದಿರೆ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಗೋಕಳ್ಳತನ:ಪೊಲೀಸ್ ಇಲಾಖೆಗೆ ಆಗ್ರಹಿಸಿದ ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್
ಮುಲ್ಕಿ ಮೂಡುಬಿದಿರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟವು ದಿನದಿಂದ ದಿನಕ್ಕೆ ಅವ್ಯಾವಹತವಾಗಿ ನಡೆಯುತ್ತಿದ್ದು ಗೋ ಕಳ್ಳರಿಗೆ ಭಯ ಇಲ್ಲದ ವಾತಾವರಣ ನಿರ್ಮಾಣ ಆಗಿದೆ. ಪೊಲೀಸ್ ಇಲಾಖೆ ಗೋ ಕಳ್ಳರ ವಿರುದ್ಧ ಸೂಕ್ತ ಕ್ರಮ ಜರುಗಿಸಿಕೊಳ್ಳಬೇಕು ಎಂದು ಮುಲ್ಕಿ ಮೂಡಬಿದಿರೆ ಭಾರತೀಯ ಜನತಾ ಪಾರ್ಟಿಯ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಮೂಡುಬಿದಿರೆ ಮುಲ್ಕಿ ಭಾಗದಲ್ಲಿ ಹಲವಾರು ಗೋ ಕಳ್ಳತನ, ಅಕ್ರಮ ಗೋಸಾಗಾಟ ಪ್ರಕರಣಗಳು ಬಯಲಿಗೆ ಬಂದಿದೆ. ಈ ಬಗ್ಗೆ ಹಿಂದೂ ಸಂಘಟನೆಯ ಯುವಕರು ಕಾರ್ಯಾಚರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ ಉದಾಹರಣೆಗಳು ಇವೆ. ಹೀಗಾಗಿ ಪೊಲೀಸರು ಗಸ್ತು ನಿಂತು ಅಕ್ರಮ ಗೋಸಾಗಾಟವನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.
0 Comments