ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಕ್ರೀಡಾಪಟುಗಳು ಸಾಧನೆ ಮಾಡಿ: ಅಭಯಚಂದ್ರ ಜೈನ್

ಜಾಹೀರಾತು/Advertisment
ಜಾಹೀರಾತು/Advertisment

 ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ

ಕ್ರೀಡಾಪಟುಗಳು ಸಾಧನೆ ಮಾಡಿ: ಅಭಯಚಂದ್ರ ಜೈನ್


 ಮೂಡುಬಿದಿರೆ ತಾಲೂಕು ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು


ವಿದ್ಯಾಗಿರಿ: ಹಿಂದೆ ಕ್ರೀಡಾ ಸೌಲಭ್ಯಗಳ ಕೊರತೆ ಇದ್ದು, ಕ್ರೀಡಾಪಟುಗಳಿಗೆ ಸಾಧನೆ ಮಾಡಲು ಕಷ್ಟವಾಗುತ್ತಿತ್ತು. ಇಂದು ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕಾಣುತ್ತಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.


ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮಂಗಳವಾರ ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ 2024-25 ವನ್ನು ಉದ್ಘಾಟಿಸಿ ಅವರು ಮಾತನಾಡಿದರು .  

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಸಿ.ಡಿ. ಜಯಣ್ಣ   ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯು ಕ್ರೀಡಾಕೂಟಗಳ ಆಯೋಜನೆಗೆ ಹೆಸರುವಾಸಿ. ಯಾವುದೇ ಕ್ರೀಡಾಕೂಟದಲ್ಲಿ ಸೋಲು ಮತ್ತು ಗೆಲುವು   ಸಾಮಾನ್ಯ. ಕ್ರೀಡಾಪಟುಗಳು ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದು ಬಹಳ ಅವಶ್ಯಕ ಎಂದು ಸಲಹೆ ನೀಡಿದರು.


ಶಿಸ್ತು, ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಯಶಸ್ಸು ಖಚಿತ ಎಂದರು.

ಮೋಹನ ಆಳ್ವರು ಕ್ರೀಡೆಗೆ ನೀಡುವ ಪ್ರೋತ್ಸಾಹ, ಸಹಕಾರ ಮತ್ತು ಕ್ರೀಡೆಗೆ ಸ್ಪಂದಿಸುವ ಮನೋಭಾವ ಎಲ್ಲರಿಗೂ ಸ್ಪೂರ್ತಿದಾಯಕ ಎಂದು ಅವರು ಬಣ್ಣಿಸಿದರು.

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ ಮಹಮ್ಮದ್ ಸದಾಕತ್ ಕ್ರೀಡಾಕೂಟದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶ್ಮಿತಾ ಕ್ರೀಡಾ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.

ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರೇಮನಾಥ ಶೆಟ್ಟಿ, ಗಣಪತಿ ಪ.ಪೂ ಕಾಲೇಜಿನ ಕ್ರೀಡಾ ಸಂಯೋಜಕ ಶಶಿಧರ್ ಮಾಣಿ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಸುಧಾಕರ ಶೆಟ್ಟಿ, ಕಡಬದ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಾರ್ಜ್ ಟಿ ಎಸ್,  ಆಳ್ವಾಸ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನವೀನ್ ರೈ ಇದ್ದರು.

ಆಳ್ವಾಸ್ ಪ.ಪೂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


ಜಿಲ್ಲಾಮಟ್ಟದ ಪ.ಪೂ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ಸಮಾರೋಪ ಸಮಾರಂಭ - 2024 "

ಸತತ 18ನೇ ಬಾರಿ ಮೂಡುಬಿದಿರೆ ತಾಲೂಕು ಸಮಗ್ರ ಚಾಂಪಿಯನ್

ಮೂಡುಬಿದಿರೆ ತಾಲೂಕನ್ನು ಆಳ್ವಾಸ್ ಪ.ಪೂ ಕಾಲೇಜಿನ 18 ಬಾಲಕಿಯರ ಮತ್ತು 23 ಬಾಲಕರ ತಂಡ ಪ್ರತಿನಿಧಿಸಿದ್ದು, ಬಾಲಕರ ವಿಭಾಗದಲ್ಲಿ  ಒಟ್ಟು 12 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕ ಪದಕದೊಂದಿಗೆ ಒಟ್ಟು 26 ಪದಕಗಳು, ಬಾಲಕಿಯರ ವಿಭಾಗದಲ್ಲಿ 7 ಚಿನ್ನ , 11 ಬೆಳ್ಳಿ, 6 ಕಂಚಿನ ಪದಕಗಳೊಂದಿಗೆ 24 ಪದಕಗಳೊಂದಿಗೆ  ಮೂಡುಬಿದಿರೆ ತಾಲೂಕು ಎರಡು ವಿಭಾಗದಲ್ಲಿ "ಸಮಗ್ರ ಪ್ರಶಸ್ತಿ"ಗೆ ಭಾಜನವಾಹಿತು.

ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಪ.ಪೂ ಕಾಲೇಜಿನ ದಯಾನಂದ್ ಮತ್ತು ಮೂಲ್ಕಿ ತಾಲೂಕನ್ನು ಪ್ರತಿನಿಧಿಸಿದ ರಂಗಣ್ಣ ಬಾಲಕರ ವಿಭಾಗದಲ್ಲಿ  "ಬೆಸ್ಟ್ ಅಥ್ಲೀಟ್ ಪ್ರಶಸ್ತಿ "ಗೆ ಭಾಜನರಾದರು.

ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಪ. ಪೂ ಕಾಲೇಜಿನ ಚರಿಷ್ಮಾ "ಬೆಸ್ಟ್ ಅಥ್ಲೀಟ್ ಪ್ರಶಸ್ತಿಗೆ’ ಲಭಿಸಿತು.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ,ಆಳ್ವಾಸ್ ಪ.ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ ಮಹಮ್ಮದ್ ಸದಾಕತ್, ಜಿಲ್ಲಾ ಪ.ಪೂ ಕಾಲೇಜಿನ ಕ್ರೀಡಾ ಸಂಯೋಜಕ ಶಶಿಧರ್ ಮಾಣಿ, ಪ.ಪೂ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ  ಅಧ್ಯಕ್ಷ ಪ್ರೇಮನಾಥ್ ಶೆಟ್ಟಿ, ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕ ನವೀನ್ ಹೆಗ್ಡೆ,  ಆಳ್ವಾಸ್ ಪ.ಪೂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನವೀನ್ ರೈ , ದಕ್ಷಿಣ ಕನ್ನಡ ವೇಟ್ ಲಿಫ್ಟಿಂಗ್ ಅಸೋಸಿಯೇಷನ್ ನ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಹಾಗೂ ವಿವಿಧ ಪ.ಪೂ ಕಾಲೇಜಿನ ಕ್ರೀಡಾಪಟುಗಳು, ಕ್ರೀಡಾಧಿಕಾರಿಗಳು ಇದ್ದರು.

Post a Comment

0 Comments