ಮಹಾವೀರ ಕಾಲೇಜಿನ ಎನ್ ಎಸ್ ಎಸ್ ನ ವಾರ್ಷಿಕ ವಿಶೇಷ ಶಿಬಿರ ಆರಂಭ
ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ದ.ಕ.ಜಿ.ಪ.ಹಿ. ಪ್ರಾಥಮಿಕ ಶಾಲೆ ಪಡ್ಡಂದಡ್ಕದಲ್ಲಿ ಗುರುವಾರ ಆರಂಭಗೊಂಡಿತು.
ಉದ್ಘಾಟನಾ ಸಮಾರಂಭ ನೆರವೇರಿತು. ಉದ್ಘಾಟಕರಾಗಿ, ಪಡ್ಡಂದಡ್ಕ ಶಾಲೆಯ ಸ್ಥಾಪಕ ಅಧ್ಯಕ್ಷ, ಪ್ರಗತಿಪರ ಕೃಷಿಕ ಶಂಕರ್ ಭಟ್ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಈ ಶಿಬಿರವು ವಿದ್ಯಾರ್ಥಿಗಳ ಜೀವನಕ್ಕೆ ಪೂರಕ. ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡುವ ಮೂಲಕ ಅವರ ಸಮಸ್ಯೆಗಳನ್ನು ಅರಿತುಕೊಳ್ಳಲು ಈ ಶಿಬಿರವು ಸಹಾಯ ಮಾಡುತ್ತದೆ ಎಂದು ಹೇಳಿದರು.
ಜಿ.ಪಂ.ನ ಮಾಜಿ ಸದಸ್ಯ ಪಿ.ಧರಣೇಂದ್ರ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಸಭಾ ಕಂಪನ ದೂರಮಾಡಿ ಧೈರ್ಯ ತುಂಬುವ ಕಾರ್ಯವನ್ನು ಮಾಡುತ್ತದೆ. ಶಿಬಿರಾರ್ಥಿಗಳಿಗೆ ಹಳ್ಳಿಯ ಬದುಕಿನ ಅನುಭವವನ್ನು ಪಡೆಯಲು ನೆರವಾಗುತ್ತದೆ ಎಂದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಅಧ್ಯಕ್ಷತೆ ವಹಿಸಿ, ‘ಈ ಶಿಬಿರವು ಶಿಬಿರಾರ್ಥಿಗಳಿಗೆ ಜೀವನಪರ್ಯಂತ ನೆನಪಿಡುವಂತಹ ಸುಂದರ ಅನುಭವಗಳನ್ನು ಮತ್ತು ಜ್ಞಾನವನ್ನು ನೀಡುವಂತಾಗಲಿ. ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಜೀವನದ ಮೌಲ್ಯಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಅವುಗಳನ್ನು ತಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ಎಂದರು.
ಇಸ್ಮಾಯಿಲ್ ಕೆ. ಪೆರಿಂಜೆ, ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಅಧಿಕಾರಿ ಜಗದೀಶ್ ಹೆಚ್. ಎನ್, ಹೊಸಂಗಡಿ ಗ್ರಾಮ ಪಂಚಾಯತ್ ಅಧಿಕಾರಿ ಗಣೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಬಿರಕ್ಕೆ ಶುಭ ಹಾರೈಸಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಭಟ್, ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಹರಿಪ್ರಸಾದ್, ಪ್ರಕಾಶ್, ಪಡ್ಯಂದಡ್ಕ ಶಾಲೆಯ ಹಿರಿಯ ಶಿಕ್ಷಕಿ ವಿನೋದ ಕುಮಾರಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ಎನ್.ಎಸ್.ಎಸ್. ಘಟಕದ ವಿಧ್ಯಾರ್ಥಿ ಪ್ರತಿನಿಧಿಗಳಾದ ಪೂಜಾ ಮತ್ತು ಶಿವಾನಂದ ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ರಶ್ಮಿತಾ ಸ್ವಾಗತಿಸಿದರು.
ಉಪನ್ಯಾಸಕಿ ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.ಉಪನ್ಯಾಸಕಿ ಕವಿತಾ ಧನ್ಯವಾದಗೈದರು.
0 Comments