ನಾಳೆ ಮೂಡುಬಿದಿರೆಯಲ್ಲಿ ಸ್ತ್ರೀ ರೋಗ ಮಾಹಿತಿ ಹಾಗು ಉಚಿತ ಆರೋಗ್ಯ ತಪಾಸಣ ಶಿಬಿರ

ಜಾಹೀರಾತು/Advertisment
ಜಾಹೀರಾತು/Advertisment

 ನಾಳೆ ಮೂಡುಬಿದಿರೆಯಲ್ಲಿ ಸ್ತ್ರೀ ರೋಗ ಮಾಹಿತಿ ಹಾಗು  ಉಚಿತ ಆರೋಗ್ಯ ತಪಾಸಣ ಶಿಬಿರ


 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ಸ್ನಾತಕೋತ್ತರ ವಿಭಾಗ, ಎ.ಎ.ಎಂ.ಸಿ. ಇವುಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆಯ ಬಂಟರ ಸಂಘ ಮಹಿಳಾ ಘಟಕ (ರಿ)ಇದರ ಸಹಯೋಗದೊಂದಿಗೆ, ಕನ್ನಡ ಭವನ ಮೂಡುಬಿದಿರೆಯಲ್ಲಿ ನಾಳೆ ಅ ಬೆಳಗ್ಗೆ ೯:೦೦ ರಿಂದ ಮಧ್ಯಾಹ್ನ ೧:೦೦ ಗಂಟೆಯ ವರೆಗೆ ಸ್ತ್ರೀರೋಗ ಮಾಹಿತಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.


ತಜ್ಞ ಆಯುರ್ವೇದ ವೈದ್ಯರೊಂದಿಗೆ ಸಮಾಲೋಚನೆ, ನುರಿತ ವೈದ್ಯಕೀಯ ವೃತ್ತಿಪರರಿಂದ ಸಮಗ್ರ ಮೌಲ್ಯಮಾಪನ, ಸ್ತ್ರೀರೋಗಗಳು  ಹಾಗೂ ಅವುಗಳನ್ನು ತಡೆಗಟ್ಟುವ ಕ್ರಮಗಳ ತಿಳುವಳಿಕೆ ಮತ್ತು ಪರಿಣಿತರೊಂದಿಗೆ ಸಂವಾದಾತ್ಮಕ ಪ್ರಶ್ನೋತ್ತರ ಈ ಶಿಬಿರದ ವಿಶೇಷತೆಯಾಗಿದೆ.


ಆಳ್ವಾಸ್ ಹೆಲ್ತ್ ಸೆಂಟರ್ ನ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ ಡಾ ಹನಾ ಶೆಟ್ಟಿ ಈ ಶಿಬಿರದ ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟರ ಸಂಘ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿರುವರು. ಆಳ್ವಾಸ್ ಆಯುರ್ವೇದದ  ತಜ್ಞ ವೈದ್ಯರುಗಳು ಈ ಶಿಬಿರವನ್ನು ನಡೆಸಿ ಕೊಡಲಿದ್ದಾರೆ.


ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Post a Comment

0 Comments