ಪ್ಲಾಸ್ಟಿಕ್ ನಿರ್ಮೂಲನೆಗೆ ಸಮುದಾಯದ ಸಹಭಾಗಿತ್ವ ಅಗತ್ಯ: ಸಿಇಓ ಡಾ. ಆನಂದ ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಪ್ಲಾಸ್ಟಿಕ್ ನಿರ್ಮೂಲನೆಗೆ ಸಮುದಾಯದ ಸಹಭಾಗಿತ್ವ ಅಗತ್ಯ:  ಸಿಇಓ ಡಾ. ಆನಂದ ಕೆ

ಮೂಡುಬಿದಿರೆ : ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಹೆಚ್ಚು ಬಳಸುವ ಮೂಲಕ  ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಬಹುದು. ಪ್ಲಾಸ್ಟಿಕ್ ನಿರ್ಮೂಲನೆಗೆ ಸ್ಥಳೀಯಾಡಳಿತ ಸಂಸ್ಥೆಗಳು ಶ್ರಮಿಸಿಸುತ್ತಿದ್ದು, ಇದರ ಯಶಸ್ವಿಗೆ  ಸಮುದಾಯದ ಸಹಭಾಗಿತ್ವ ಅಗತ್ಯ. ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರತಿನಿಧಿಗಳಾಗಿ ವಿದ್ಯಾರ್ಥಿಗಳು  ಕಾರ್ಯ ನಿರ್ವಹಿಸಬೇಕು ಎಂದು ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ. ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್ ಮತ್ತು ಬಲ್ಮಠದ ಸರ್ಕಾರಿ  ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹಭಾಗಿತ್ವದಲ್ಲಿ ಮಂಗಳವಾರ ಬಲ್ಮಠದ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ

ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಉದ್ಘಾಟಿಸಿ  ಮಾತನಾಡಿದರು.

ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಣೆ ಮಾಡದೆ ನೀಡುವ ಕಾರಣ ಸ್ಥಳೀಯಾಡಳಿತ ಸಂಸ್ಥೆಗಳಿಗೆ ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿ ಪರಿಣಮಿಸಿದೆ. ಮೂಲದಲ್ಲೇ ತ್ಯಾಜ್ಯ ವಿಂಗಡಣೆ ಮಾಡಿದರೆ ಸಮರ್ಪಕ ವಿಲೇವಾರಿ ಸಾಧ್ಯ. ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸುವುದರ ಜತೆಗೆ  ಮರುಬಳಕೆ ಮಾಡುವ ಉತ್ಪನ್ನಗಳ  ಬಗ್ಗೆ ಗಮನಹರಿಸಿದರೆ ಪರಿಸರಕ್ಕೆ ಹಾನಿಯಾಗುವುದನ್ನು ತಡೆಗಟ್ಟಬಹುದು ಎಂದು ಅವರು ಹೇಳಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ  ಪ್ರಾಂಶುಪಾಲ ಡಾ ಜಗದೀಶ ಬಾಳ ಅಧ್ಯಕ್ಷತೆ ವಹಿಸಿದ್ದರು.

ಅದಾನಿ ಸಂಸ್ಥೆಯ ಎಜಿಎಂ ರವಿ ಜೇರಾ ವಿದ್ಯಾರ್ಥಿಗಳಿಗೆ ಬಟ್ಟೆ ಬ್ಯಾಗ್ ವಿತರಿಸಿದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್

ಅಧ್ಯಕ್ಷ ಬ್ರಾಯನ್ ಪಿಂಟೊ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪುಷ್ಪರಾಜ್ ಜೈನ್ , ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ

ಭಾಗವಹಿಸಿದ್ದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್  ಪೂರ್ವಾಧ್ಯಕ್ಷ ಸಂತೋಷ್ ಶೇಟ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,  ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್. ಉಪಸ್ಥಿತರಿದ್ದರು.  ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments