ಸರಳತೆಯಿಂದ ಜೀವನ ನಡೆಸಿದವರು ಗಾಂಧೀಜಿ : ಪುಂಡಿಕಾಯಿ ಗಣಪಯ್ಯ ಭಟ್
ಮೂಡುಬಿದಿರೆ: ಗಾಂಧೀಜಿ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡವರು. ಬಾಲ್ಯದಿಂದಲೂ ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಪಾಲಿಸುವುದರ ಜೊತೆಗೆ, ತಾನು ತೆಗೆದುಕೊಂಡ ಪ್ರತಿಜ್ಞೆಗಳನ್ನು ಜೀವನದುದ್ದಕ್ಕೂ ಪಾಲಿಸಿ ಸರಳತೆಯಿಂದ ಜೀವನ ನಡೆಸಿದವರು ಎಂದು ಮೂಡುಬಿದಿರೆಯ ಶ್ರೀ ಧವಳಾ ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಹೇಳಿದರು.
ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ‘ಗಾಂಧಿ ಜಯಂತಿ’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗಾಂಧೀಜಿಯವರ ಜೀವನ ಮತ್ತು ವ್ಯಕ್ತಿತ್ವದ ಕುರಿತು ಮಾತನಾಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಹಾಗೂ ಐಕ್ಯೂಎಸಿ ಸಂಚಾಲಕ ಪ್ರೊ. ಹರೀಶ್, ರೆಡ್‌ಕ್ರಾಸ್ ಅಧಿಕಾರಿಗಳಾದ ಶ್ರೀಗೌರಿ, ಎನ್‌ಎಸ್‌ಎಸ್ ಅಧಿಕಾರಿ ಶಾರದಾ, ರೇಂಜರ್ಸ್ ಅಧಿಕಾರಿ ಶ್ರಧ್ದಾ, ರೋವರ್ಸ್ ಅಧಿಕಾರಿ ಸಂದೀಪ್ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಮೊದಲಿಗೆ ನಡೆದ ‘ಗಾಂಧೀ ಸ್ಮೃತಿ’ ಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಗಾಂಧೀಜಿಯವರಿಗೆ ಪ್ರಿಯವಾದ ಭಜನೆಯ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಗಾಂಧೀ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳಾದ ಸಂಜನಾ ಸ್ವಾಗತಿಸಿ, ರಕ್ಷಿತಾ ವಂದಿಸಿದರು. ಸಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಗಾಂಧೀಜಯಂತಿಯ ಅಂಗವಾಗಿ ಕಾಲೇಜಿನ ಗ್ರಂಥಾಲಯದಲ್ಲಿ ಗಾಂಧಿ ಸಾಹಿತ್ಯ ಕುರಿತಾದ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
0 Comments