ಪ.ಪೂ. ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ,(ಪದವಿಪೂರ್ವ) ದ.ಕ. ಹಾಗೂ ಮಹಾವೀರ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು ೨೮ ಚಿನ್ನ, ೨೩ ಬೆಳ್ಳಿ ಮತ್ತು ೦೨ ಕಂಚಿನ ಪದಕಗಳೊಂದಿಗೆ ೫೩ ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ ೧೦೭ ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ ೧೦೪ ಅಂಕ ಒಟ್ಟು ೨೧೧ ಅಂಕದೊAದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಬಾಲಕರÀ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಜೈನ್ ಪದವಿ ಪೂರ್ವ ಕಾಲೇಜು ೧೫ ಅಂಕಗಳೊAದಿಗೆ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರÀ ವಿಭಾಗದಲ್ಲಿ ರೋಟರಿ ಪದವಿಪೂರ್ವ ಕಾಲೇಜು ೧೫ ಅಂಕ ಪಡೆದು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ದಯಾನಂದ ಮತ್ತು ಶಿವಾನಂದ ಪಡೆದುಕೊಂಡರು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ಚರಿಷ್ಮಾ ಪಡೆದುಕೊಂಡರು.
0 Comments