ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟ: ಸರಕಾರಿ ಶಾಲೆಯ ವಿದ್ಯಾರ್ಥಿ ಸಮೃದ್ದ್ ಚಾಂಪಿಯನ್
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ, ದ.ಕ. ಹಾಗೂ ಸರ್ಕಾರಿ ಪ್ರೌಢಶಾಲೆ ನೆಲ್ಲಿಕಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಬೆಳುವಾಯಿ ಮೈನ್ ಶಾಲೆಯ ಸಮೃದ್ದ್ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿ ಬಂದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
200 ಮೀಟರ್ ಓಟ ಮತ್ತು ಶಾಟ್ ಫುಟ್ ನಲ್ಲಿ ಪ್ರಥಮ ಹಾಗೂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುವ ಸಮೃದ್ಧ್ ಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಅರುಣ ಮತ್ತು ಕೋಚ್ ರಘು ಅವರು ತರಬೇತಿ ನೀಡಿದ್ದರು.
0 Comments