ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಡುಬಿದಿರೆ : ಮಹಿಷಮರ್ದಿನಿ ಕಂಬಳ ಸಮಿತಿ ಇದರ ನೇತೃತ್ವದಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪೂಂಜ ದೇವಸ್ಥಾನದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಇವರು ಹೊಕ್ಕಾಡಿಗೋಳಿ ಕಂಬಳದ ವಠಾರದಲ್ಲಿ ಗುರುವಾರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪೂಂಜ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನ ಕುಮಾರ್ ಚೌಟ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರ್, ಸದಸ್ಯ ಯೋಗೀಶ್ ಆಚಾರ್ಯ, ಗೌರವ ಸಲಹೆಗಾರ ಜಗತ್ಪಾಲ್ ಶೆಟ್ಟಿ ಉಮಾನೊಟ್ಟು, ಕುಟ್ಟಿ ಶೆಟ್ಟಿ ಹಕ್ಕೇರಿ, ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಲಿಮೇರು ಹಾಗೂ ಎಲ್ಲಾ ಪದಾಧಿಕಾರಿಗಳು, ಸ್ಥಳ ದಾನಿಗಳು ಈ ಸಂದರ್ಭದಲ್ಲಿದ್ದರು.
0 Comments