ಮೂಡುಬಿದಿರೆಗೆ ಆಗಮಿಸಿದ ಕನ್ನಡ ರಥಯಾತ್ರೆ
ಮೂಡುಬಿದಿರೆ : ಸೆ. 22ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಭುವನಗಿರಿಯಿಂದ ಹೊರಟ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ' ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಿಂದ ಮೂಡುಬಿದಿರೆ ತಾಲೂಕಿಗೆ ಆಗಮಿಸಿದ ರಥವನ್ನು ತಾಲೂಕು ಆಡಳಿತ ಸೌಧದ ಎದುರು ಪ್ರಮುಖರು ಗುರುವಾರ ಸ್ವಾಗತಿಸಿ ಬರಮಾಡಿಕೊಂಡರು.
೧೯ ಜಿಲ್ಲೆಗಳ ಮೂಲಕ ರಥವು ದ..ಕ. ಜಿಲ್ಲೆಗಾಗಮಿಸಿದೆ. ಇಲ್ಲಿಂದ ಹತ್ತು ಜಿಲ್ಲೆಗಳ ಮೂಲಕ ಹಾದು ಸಮ್ಮೇಳನದ ಸಂದರ್ಭ ಮಂಡ್ಯ ತಲುಪಲಿದೆ.
ಗುರುವಾರ ಬೆಳಗ್ಗೆ ಕಾರ್ಕಳದಿಂದ ಚಿಲಿಂಬಿಯಲ್ಲಿ ಕಾರ್ಕಳ ತಾ. ಕ.ಸಾ.ಪ. ಅಧ್ಯಕ್ಷ ಪ್ರಭಾಕರ ಕೊಂಡಳ್ಳಿ ಇವರು ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್, ಬೆಳುವಾಯಿ ಗ್ರಾ.ಪಂ. ಅಧ್ಯಕ್ಷ ಸುರೇಶ್ ಕೆ. ಪೂಜಾರಿ, ಪಿಡಿಓ ಭೀಮ ನಾಯಕ್, ಕ.ಸಾ.ಪ. ಮೂಡುಬಿದಿರೆ ಘಟಕದ ಪದಾಧಿಕಾರಿಗಳಾದ ಸದಾನಂದ ನಾರಾವಿ, ರಾಜವರ್ಮ ಬೈಲಂಗಡಿ, ಆಂಡಾರು ಗುಣಪಾಲ ಹೆಗ್ಡೆ, ಯತಿರಾಜ್ ಶೆಟ್ಟಿ ಮೊದಲಾದವರ ಉಪಸ್ಥಿತಿಯಲ್ಲಿ ಕ.ಸಾ.ಪ. ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಇವರಿಗೆ ಕನ್ನಡ ಧ್ವಜ ಹಸ್ತಾಂತರಿಸಿ ರಥವನ್ನು ಬೀಳ್ಕೊಟ್ಟರು.
ತಾ.ಪಂ. ಕಾರ್ಯನಿರ್ವಹಣಾಽಕಾರಿ ಕುಸುಮಾಧರ ಬಿ. ಉಪ ತಹಶೀಲ್ದಾರರಾದ ಬಾಲಚಂದ್ರ, ರಾಮ ಕೆ., ತಿಲಕ್, ಕ್ಷೇತ್ರ ಶಿಕ್ಷಣ ಅಧಿಕಾರಿ ವಿರೂಪಾಕ್ಷಪ್ಪ, ಮೂಡುಬಿದಿರೆ ಪುರಸಭಾ ಅಧ್ಯಕ್ಷೆ ಜಯಶ್ರೀ , ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಖ್ಯಾಧಿಕಾರಿ ಇಂದು ಎಂ., `ಮುಡಾ ' ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಸ.ಆ.ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಭುವನೇಶ್ವರಿಯ ವಿಗ್ರಹಕ್ಕೆ ಮಾಲಾರ್ಪಣೆಗೈದರು.
ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ
ಮುಂದಿನ ತಿಂಗಳಲ್ಲಿ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಡಿನ ಮೂಲೆ ಮೂಲೆಗಳಿಂದ, ಗ್ರಾಮ ಗ್ರಾಮಗಳಿಂದ ಕನ್ನಡಿಗರು ಆಗಮಿಸಿ ಸಮ್ಮೇಳನದ ಯಶಸ್ಸಿನಲ್ಲಿ ಕೈ ಜೋಡಿಸಬೇಕಾಗಿದೆ. ಗ್ರಾಮ ಗ್ರಾಮಗಳಲ್ಲಿ ಕನ್ನಡಿಗರನ್ನು ಸಮ್ಮೇಳನಕ್ಕೆ ಸ್ವಾಗತಿಸಲು ಪೂರಕ ವಾತಾವರಣ ನಿರ್ಮಿಸುವುದೇ ಈ ರಥ ಯಾತ್ರೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ವಾಣಿಜ್ಯ ತೆರಿಗೆ ಮತ್ತಿತರ ಇಲಾಖಾಧಿಕಾರಿಗಳು , ಸಿಬಂದಿಗಳು, ವಿವಿಧ ವಿದ್ಯಾಸಂಸ್ಥೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಮೂಡುಬಿದಿರೆ ಕಸಾಪ ಪದಾಧಿಕಾರಿಗಳು, ಸದಸ್ಯರು ` ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆಗೈದು ನಮಿಸಿದರು.
ನಂತರ ರಥವು ಮಂಗಳೂರಿನತ್ತ ಚಲಿಸಿತು.
0 Comments