ಶ್ರೀ ಮಹಾವೀರ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
ಮೂಡುಬಿದಿರೆ: “೬೦ ವರ್ಷಗಳ ಇತಿಹಾಸ ಇರುವ ಮಹಾವೀರ ಕಾಲೇಜು ಇಂದು ೬೦ನೇ ಕ್ರೀಡಾ ಕೂಟ ಆಚರಿಸುತ್ತಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ. ಕ್ರೀಡೆಗೆ ನಮ್ಮ ದೇಶದಲ್ಲಿ ಪ್ರಾಮುಖ್ಯತೆ ಇದೆ. ಕ್ರೀಡಾ ಸಾಧನೆ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿ ಲಭಿಸುತ್ತದೆ. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವವರನ್ನು ಪ್ರೋತ್ಸಾಹಿಸಿ ಹಾಗೂ ಗೆದ್ದವರನ್ನು ಮಾದರಿಯಾಗಿ ತೆಗೆದುಕೊಂಡು ಮುಂದಿನ ಸಾಲಿನಲ್ಲಿ ಭಾಗವಹಿಸುವ ಛಲವನ್ನು ಹೊಂದಿ” ಎಂಬುದಾಗಿ ಮೂಡಬಿದಿರೆಯ ಉಪ ಅರಣ್ಯಾ ಸಂರಕ್ಷಣಾಧಿಕಾರಿ ಪಿ ಶ್ರೀಧರ್ ಹೇಳಿದರು.
ಅವರು ಮೂಡುಬಿದಿರೆಯ ಶ್ರೀ ಮಹಾವೀರಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ, ಎಂ.ಕೆ.ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಎಸ್.ಎನ್.ಎಂ.ಪಾಲಿಟೆಕ್ನಿಕ್ ಪ್ರಾಂಶುಪಾಲ ಜೆ.ಜೆ.ಪಿಂಟೋ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್, ವಿದ್ಯಾರ್ಥಿ ಸಂಘದ ನಾಯಕಿ ಶೃತಿ ಪೇರಿ, ಕ್ರೀಡಾ ಕಾರ್ಯದರ್ಶಿ ಪ್ರಣೀಶ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ರೊಹಿಸ್ಟನ್ ಪಿಂಟೋ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು, ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ ಕ್ರೀಡಾ ಸಾಧಕ ವಿದ್ಯಾರ್ಥಿಗಳ ವಿವರ ನೀಡಿದರು. ಕ್ರೀಡಾ ಕಾರ್ಯದರ್ಶಿ ಪ್ರಣೀಶ್ ಕ್ರೀಡಾಳುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.
0 Comments