ಆನೆಗುಡ್ಡೆ ಅಂಗನವಾಡಿ ಕೇಂದ್ರ ಉದ್ಘಾಟನೆ

ಜಾಹೀರಾತು/Advertisment
ಜಾಹೀರಾತು/Advertisment

 ಆನೆಗುಡ್ಡೆ ಅಂಗನವಾಡಿ ಕೇಂದ್ರ ಉದ್ಘಾಟನೆ

ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅವರ ಶಾಸಕರ ನಿಧಿಯಿಂದ 12 ಲಕ್ಷ ಹಾಗೂ ಕೆ.ಆರ್.ಡಿ.ಎಲ್. ನಿಂದ 10 ಲಕ್ಷ –  ಒಟ್ಟು 22 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಾಲ್ಪಾಡಿ ಗ್ರಾಮದ ಆನೆಗುಡ್ಡೆ ಅಂಗನವಾಡಿ ಕೇಂದ್ರವನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿದರು.

ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಾ ಕೆ.ಕಾರಿಗಿ ,ಜಿ.ಪಂ.ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಿತಿನ್ ನಾಯಕ್, ಪಂಚಾಯತ್ ಉಪಾಧ್ಯಕ್ಷ ಗಣೇಶ್ ಬಿ.ಅಳಿಯೂರು, ಸದಸ್ಯ, ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್, ಶಿರ್ತಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಫ್ರೆಡ್ರಿಕ್ ಪಿಂಟೊ, ಆನೆಗುಡ್ಡೆ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯ ಜೆರಾಲ್ಡ್ ಮಿರಾಂದ ಅತಿಥಿಗಳಾಗಿ ಭಾಗವಹಿಸಿದ್ದರು.


ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಿತಿಯ ಅಧ್ಯಕ್ಷ, ನಿàವೃತ್ತ ಮುಖ್ಯೋಪಾಧ್ಯಾಯ ನೋಬರ್ಟ್ ಪಿರೇರ, ಕೃಷಿ ಕಾರ್ಮಿಕ ಸಂಘದ ಅಧ್ಯಕ್ಷ ಜಯಾನಂದ ಕೋಟ್ಯಾನ್, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಆಶಾ ಸಮಿತ್ ರಾಜ್, ಶ್ರೀ ದುರ್ಗಾ ಸ್ತ್ರೀ ಶಕ್ತಿ ಸಂಘದ ಕಾರ್ಯದರ್ಶಿ  ನಮಿತಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments