ಕ್ಲಾಟ್ (ಸಿಎಲ್‌ಎಟಿ)- 2025 ಫಲಿತಾಂಶ: ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಜಾಹೀರಾತು/Advertisment
ಜಾಹೀರಾತು/Advertisment

 ಕ್ಲಾಟ್ (ಸಿಎಲ್‌ಎಟಿ)- 2025 ಫಲಿತಾಂಶ: ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ  

 ಮೂಡುಬಿದಿರೆ: ಕ್ಲಾಟ್ ಒಕ್ಕೂಟವು 1ನೇ ಡಿಸೆಂಬರ್ 2024 ರಂದು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ) 2025 ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಅಹನಾ ಎಂ.ಕೆ., ಕಾರ್ತಿಕ್ ಆರ್. ಮಳಲಿ ಮತ್ತು ಅಭಿನವ್ ಎಂ.ಎಸ್. ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಗಳಿಸಿದ್ದಾರೆ.

ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಶಿಸ್ತು, ಬದ್ಧತೆ ಸಂಸ್ಥೆಗೆ ಹೆಮ್ಮೆ ತಂದಿದೆ. ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳು ವಿವಿಧ ಶೈಕ್ಷಣಿಕ ಮತ್ತು ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ನಿರಂತರವಾಗಿ ಅಸಾಧಾರಣ ಫಲಿತಾಂಶಗಳನ್ನು ನೀಡುತ್ತಿದೆ. ಸಮಗ್ರ ಕಲಿಕೆ ಮತ್ತು ವೈಯಕ್ತಿಕ ಮಾರ್ಗದರ್ಶನದಿಂದ  ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿದೆ . ವಿದ್ಯಾರ್ಥಿಗಳ ಅದ್ಭುತ ಸಾಧನೆಯನ್ನು  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ‍್ಯ ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್‌ಡಿ ಅಭಿನಂದಿಸಿದ್ದಾರೆ.

Post a Comment

0 Comments