ಬೆಳುವಾಯಿ ಸಹಕಾರಿ ಸಂಘ ಅಧ್ಯಕ್ಷರಾಗಿ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಉಷಾ ಡಿ. ಪೈ ಆಯ್ಕೆ
ಮೂಡುಬಿದಿರೆ : ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಭಾಸ್ಕರ ಎಸ್. ಕೋಟ್ಯಾನ್ ಮತ್ತು ಉಪಾಧ್ಯಕ್ಷರಾಗಿ ಉಷಾ ಡಿ. ಪೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾಸ್ಕರ್ ಕೋಟ್ಯಾನ್‌ರವರು 2015ರಿಂದ 3ನೇ ಅವಧಿಗೆ ಅಧ್ಯಕ್ಷರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿರುವ ಅವರ ತಂಡ ಬೆಳುವಾಯಿ ಸಹಕಾರಿ ಸಂಘದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ.
ಬೆಳುವಾಯಿ ಸಂಘದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಮೂಡುಬಿದಿರೆ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ವಿಲಾಸ್ ವಿ. ಚುನಾವಣಾ ಪ್ರಕ್ರಿಯೆ ನಡೆಸಿದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.
0 Comments