ಉಜಿರೆ ಶ್ರೀ ಧ. ಮ. ಅನುದಾನಿತ ಹಿ. ಪ್ರಾ. ಶಾಲೆ ಶತಮಾನೋತ್ಸವ ಆಚರಣೆ ಸಮಾಲೋಚನಾ ಸಭೆ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಡಿ. 1 ರಂದು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರ ಅಧ್ಯಕ್ಷತೆಯಲ್ಲಿ ಡಿ. 2ರಂದು ನಡೆಯಿತು.
1925ರ ಜು. 8ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಆನುವಂಶಿಕ ಆಡಳಿತ ಮೊಕ್ತಸರ ಕೃಷ್ಣ ಪಡುವೆಟ್ನಾಯ ಅವರು ಪ್ರಾರಂಭಿಸಿದ ಶ್ರೀ ಜನಾರ್ದನ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ 1955 ರಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟಿತು. 2025ಕ್ಕೆ ಶಾಲೆಗೆ ನೂರು ವರ್ಷ ಪೂರ್ಣಗೊಳ್ಳಲಿದೆ.
ಪ್ರಸ್ತುತ ಸಭೆಯಲ್ಲಿ, ಶತಮಾನೋತ್ಸವ ಸಮಿತಿ ರಚಿಸಿ, ಜನಾರ್ದನ ಸ್ವಾಮಿ ದೇವಾಲಯದ ಆನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡುವೆಟ್ನಾಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
ಸಭೆಯಲ್ಲಿ ಊರಿನ ಪ್ರಮುಖರು, ಹಿರಿಯ ವಿದ್ಯಾರ್ಥಿಗಳು, ಶಾಲೆಯ ನಿವೃತ್ತ ಶಿಕ್ಷಕರು ಮತ್ತಿತರರು ಭಾಗವಹಿಸಿದ್ದರು.
0 Comments