ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಮಿತ್ ಶಾ ಜೊತೆಗೆ ಚರ್ಚೆ:ಸದನಕ್ಕೆ ಮಾಹಿತಿ ಬಿಚ್ಚಿಟ್ಟ ಶಾಸಕ ಯತ್ನಾಳ್

ಜಾಹೀರಾತು/Advertisment
ಜಾಹೀರಾತು/Advertisment


 ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಮಿತ್ ಶಾ ಜೊತೆಗೆ ಚರ್ಚೆ:ಸದನಕ್ಕೆ ಮಾಹಿತಿ ಬಿಚ್ಚಿಟ್ಟ ಶಾಸಕ ಯತ್ನಾಳ್

ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಬೇಕೆಂಬ ಹೋರಾಟ ನಡೆಯುತ್ತಿದ್ದು ಈ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಮಾಡಿರುವುದು ಈಗ ರಾಜ್ಯದೆಲ್ಲೆಡೆ ಖಂಡನೆ ವ್ಯಕ್ತವಾಗಿದೆ. ಈ ನಡುವೆ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡಿರುವ ಮಹತ್ವದ ಬಗ್ಗೆ ಸದನಕ್ಕೆ ಮಾಹಿತಿ ನೀಡಿದರು.

 ಈ ಸಂದರ್ಭದಲ್ಲಿ ದಾಖಲೆ ಸಹಿತವಾಗಿ ಮಾಹಿತಿಯನ್ನು ಒದಗಿಸಿದ ಯತ್ನಾಳ್‌ರವರು ಈ ಹಿಂದೆ ಬಿಜೆಪಿಯ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಮೀಸಲಾತಿ ಹೆಚ್ಚಳ ಮತ್ತು ಒಂದಷ್ಟು ಸಮುದಾಯಕ್ಕೆ ಸಹಕಾರಿಯಾಗುವಂತಹ ತಿದ್ದುಪಡಿಗಳನ್ನು ತರಲು ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾರ್ಗದರ್ಶನದಲ್ಲಿ ದೆಹಲಿಯಲ್ಲಿ ಮಾತುಕತೆ ನಡೆದಿತ್ತು. ಅಂದಿನ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಅಂದಿನ ಸಂಸದರಾದ ನಳಿನ್ ಕುಮಾರ್ ಕಟೀಲು ಮತ್ತು ಅಂದಿನ ಸಂಸದೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 3 ಗಂಟೆಯವರೆಗೆ ಗೃಹ ಸಚಿವ ಅಮಿತ್ ಶಾ ರವರ ಜೊತೆಗೆ ಸುಧೀರ್ಘ ಚರ್ಚೆ ನಡೆಸಿದ್ದೆವು. ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡುವ ಒಂದು ಹಂತದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಮಹತ್ತರ ಕಾರ್ಯಕ್ಕೆ ನಳಿನ್ ಕುಮಾರ್ ಕಟೀಲು ಹಾಗೂ ಶೋಭಾ ಕರಂದ್ಲಾಜೆ ಸಹಕರಿಸಿದ್ದರು  ಯತ್ನಾಳ್ ಸ್ಮರಿಸಿದರು. 

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಮೀಸಲಾತಿ ಬಗ್ಗೆ ಜೋರಾದ ಚರ್ಚೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Post a Comment

0 Comments