ವಿರಾಸತ್ ನಲ್ಲಿ ಕೈಮಗ್ಗ ಸೀರೆಗಳ ಉತ್ಸವ:
ಈ ಬಾರಿಯ ವಿರಾಸತ್ ನಲ್ಲಿ ಉಡುಪಿಯ ಪದ್ಮಶಾಲಿ ನೇಕಾರರ ಪ್ರತಿಷ್ಠಾನದ ಸಹಕಾರದೊಂದಿಗೆ ಭಾರತದ ೩೦ ಪ್ರದೇಶಾವಾರು ಹಾಗೂ ಜಿಐ ಟ್ಯಾಗ್ ಹೊಂದಿರುವ ಕೈಮಗ್ಗ ಸೀರೆಗಳ ಹಾಗೂ ಬಟ್ಟೆಗಳ ಉತ್ಸವ ವಿರಾಸತ್‌ನ ಮಹಾಮೇಳಗಳಲ್ಲಿ ಈ ವರ್ಷದ ಪ್ರಮುಖ ಆಕರ್ಷಣೆಯಾಗಿ ಮೂಡಿ ಬಂದಿದೆ.
ಭಾರತೀಯ ಪರಂಪರೆಯನ್ನು ಬಿಂಬಿಸುವ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ನೇಕಾರರಿಂದ ಗ್ರಾಹಕರಿಗೆ ಇಲ್ಲಿ ನೇರ ಮಾರಾಟ ನಡೆಯುತ್ತಿದ್ದು
ಜಿಐ ಟ್ಯಾಗ್ ಹೊಂದಿರುವ ಮತ್ತು ಪ್ರಸಿದ್ಧಿ ಪಡೆದಿರುವ ಕೈಮಗ್ಗದ ಉತ್ಪನ್ನಗಳು ಉಡುಪಿ, ಇಳಕಲ್, ಕೋಲ್ಕತ್ತಾ, ತುಮ್ಮಿನಕಟ್ಟೆ, ವೆಂಕಟಗಿರಿ, ಕಾಶ್ಮೀರಿ, ಕಂಚೀವರಂ, ಮೈಸೂರು, ಕೊಳ್ಳೇಗಾಲ, ದಾವಣೆಗೆರೆ, ಚೆಟ್ಟಿನಾಡ್, ಕೇರಳ, ಹೈದ್ರಾಬಾದ್, ಮದ್ರಾಸ್‌ನ ಸೀರೆಗಳು ಮತ್ತು ಬಟ್ಟೆಗಳು ಮಾರಾಟಕ್ಕಿದ್ದು ವಿರಾಸತ್ ಗೆ ಬಂದಿರುವವರನ್ನು ತನ್ನತ್ತ ಸೆಳೆಯುತ್ತಿದೆ.
ಇದಲ್ಲದೆ ಇಂಡಿಯನ್ ಆರ್ಟಿಸಾನ್ ಬಝಾರ್
ಕಲೆ ಮತ್ತು ಕರಕುಶಲ ವಸ್ತುಗಳು, ಉಡುಪುಗಳು, ಆಭರಣಗಳು, ಗೃಹಾಲಂಕಾರಿಕ ವಸ್ತುಗಳು, ಅಪರೂಪದ ಹಾಗೂ ಸಮಕಾಲೀನ ವಸ್ತುಗಳ ಬಝಾರ್ ಈ ಬಾರಿಯ ವಿರಾಸತ್‌ನಲ್ಲಿದ್ದು ಭಾರತದಾದ್ಯಂತ ತಯಾರಾದ ವೈವಿಧ್ಯಮಯ ಕರಕುಶಲ ವಸ್ತುಗಳು, ಆಯಾರಾಜ್ಯಗಳ ಕರಕುಶಲ ಕರ್ಮಿಗಳಿಂದ ನೇರ ಮಾರಾಟ. ಬೆಂಗಳೂರು ಆರ್ಟ್ಸ ಮತ್ತು ಕ್ರಾಫ್ಟ್ ಮೇಳ ಹಾಗೂ ದೆಹಲಿಯ ಮೀನಾ ಬಝಾರ್ ಮೇಳಗಳಂತೆ ಈ ಮೇಳ ನಡೆಯುತ್ತಿದೆ.
ಕೃಷಿ ಮೇಳ:
ಕೃಷಿ ಕ್ಷೇತ್ರದ ಕುರಿತು ಯುವಜನತೆಯಲ್ಲಿ ಭರವಸೆಯ ಹೊಂಗಿರಣವನ್ನು ಮೂಡಿಸುವ ನಿಟ್ಟಿನಲ್ಲಿ ರೈತರು ಹಾಗೂ ಕೃಷಿ ಸಂಸ್ಕೃತಿಯನ್ನು ಸದಾ ಪ್ರೋತ್ಸಾಹಿಸುತ್ತಾ ಬಂದಿರುವ ಆಳ್ವಾಸ್ ‘ಕೃಷಿ ಮೇಳ’ವನ್ನು ಆಯೋಜಿಸಿದ್ದು
ಕೃಷಿಯಲ್ಲಿ ಬೀಜದಿಂದ ಮಾರುಕಟ್ಟೆ ವರೆಗಿನ ಎಲ್ಲ ಘಟ್ಟಗಳ ಸಮಗ್ರ ಚಿತ್ರಣವನ್ನು ಕೃಷಿ ಮೇಳ ನೀಡುತ್ತಿದೆ. ಇದು ಕೇವಲ ಪ್ರದರ್ಶನವಲ್ಲ, ಮಾರಾಟ ಮಳಿಗೆಗಳು, ಅನುಭವ ಪ್ರಾತ್ಯಕ್ಷಿಕೆಗಳೂ ಇದ್ದು
ಈ ಬಾರಿ ಕೃಷಿ ಮೇಳದಲ್ಲಿ ಹಣ್ಣು- ತರಕಾರಿ, ಬೀಜಗಳು, ನರ್ಸರಿಗಳು, ಸಾವಯವ ಹಾಗೂ ರಾಸಾಯನಿಕ ಗೊಬ್ಬರಗಳು, ನೀರು- ನೆಲಗಳಲ್ಲಿ ಬೆಳೆಯುವ ವಿವಿಧ ಸಸ್ಯ ಪ್ರಭೇದಗಳು, ಕೃಷಿ ಉಪಕರಣ- ಯಂತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು .ವಿವಿಧ ಕೃಷಿ ಸಸ್ಯ ಪ್ರಭೇದಗಳ ಬೀಜ, ಅವುಗಳನ್ನು ಬೆಳೆಸಲು ಬೇಕಾದ ಯಂತ್ರ- ತಾಂತ್ರಿಕ ಸಲಕರಣೆಗಳು, ಕೃಷಿ ಉತ್ಪನ್ನಗಳು ವಿಶೇಷವಾಗಿ ಗಮನ ಸೆಳೆದಿವೆ.
0 Comments