ರೂ. 1.42 ಕೋ.ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ರೈಲ್ವೇ ನಿಲ್ದಾಣದ ಫ್ಲಾಟ್ ಫಾಮ್೯ ಅಭಿವೃದ್ಧಿ ಕಾಮಗಾರಿಗೆ ಸಂಸದರಿಂದ ಶಂಕುಸ್ಥಾಪನೆ

ಜಾಹೀರಾತು/Advertisment
ಜಾಹೀರಾತು/Advertisment

 ರೂ. 1.42 ಕೋ.ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ರೈಲ್ವೇ ನಿಲ್ದಾಣದ ಫ್ಲಾಟ್ ಫಾಮ್೯ ಅಭಿವೃದ್ಧಿ ಕಾಮಗಾರಿಗೆ ಸಂಸದರಿಂದ ಶಂಕುಸ್ಥಾಪನೆ

ಮೂಡುಬಿದಿರೆ:  ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಪ್ರಯತ್ನದಿಂದ ಅನುಷ್ಠಾನಗೊಳ್ಳಲಿರುವ 1.42 ಕೋಟಿ ರೂಪಾಯಿ ವೆಚ್ಚದ ಕೊಂಕಣ್ ರೈಲ್ವೆ ನಿಗಮದ ವ್ಯಾಪ್ತಿಗೆ ಬರುವಂತಹ ‌ಮುಲ್ಕಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಶಂಕುಸ್ಥಾಪನೆ ನಡೆಯಿತು.

ಎಂ.ಪಿ. ಕ್ಯಾಪ್ಟನ್ ಬೃಜೇಶ್ ಚೌಟ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆಗೈದರು.

 ಶಾಸಕ ಉಮಾನಾಥ್ ಎ. ಕೋಟ್ಯಾನ್, ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ಹರಿಪ್ರಸಾದ್ ಶೆಟ್ಟಿ, ಪಕ್ಷದ ಪ್ರಮುಖರಾದ ರಂಜಿತ್ ಪೂಜಾರಿ ತೋಡಾರು, ಶಾಂತಿಪ್ರಸಾದ್ ಹೆಗ್ಡೆ, ಸುನಿಲ್ ಆಳ್ವ, ರಂಗನಾಥ್ ಮತ್ತಿತರರು ಈ ಸಂದಭ೯ದಲ್ಲಿದ್ದರು.

Post a Comment

0 Comments