*ರಾ.ಶಿರೂರು ಅವರು ಜ್ಞಾನ ಸಿಂಧು ಪ್ರಶಸ್ತಿಗೆ ಆಯ್ಕೆ: ಎಸ್ .ವಿ. ನಾಗರಾಜ್*
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ರಾಜ್ಯಮಟ್ಟದ ಜ್ಞಾನ ಸಿಂಧು - 2025 ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. 2025 ಜನವರಿ 12ರಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಶಿಕ್ಷಣ ಜ್ಞಾನ ಸಂಘಟನೆಯ ರಾಜ್ಯಾಧ್ಯಕ್ಷರು ಮತ್ತು ಶಿಕ್ಷಣ ಜ್ಞಾನ ಮಾಸಪತ್ರಿಕೆ ಬೆಂಗಳೂರು ಇದರ ಸಂಪಾದಕರಾದ ಶ್ರೀ ಎಸ್. ವಿ. ನಾಗರಾಜ್, ಗೌರವ ಸಂಪಾದಕರಾದ ಶ್ರೀ ಎಚ್. ರಾಮಚಂದ್ರಪ್ಪ ಸ್ವಾಮಿ ಮತ್ತು ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀ ಹೆಂಗವಳ್ಳಿ ಮೆಟ್ನಗದ್ದೆ ರಾಜೀವ ಶೆಟ್ಟಿ ಅವರು ತಿಳಿಸಿರುತ್ತಾರೆ.
ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.
1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,
19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿರುವ ಇವರು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ
ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಶ್ರೀ ಎಸ್. ವಿ. ನಾಗರಾಜ್ ಮತ್ತು ಶ್ರೀ ಹೆಂಗವಳ್ಳಿ ಮೆಟ್ನಗದ್ದೆ ರಾಜೀವ ಶೆಟ್ಟಿ
ಅವರು ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
0 Comments