ಬಿಜೆಪಿ ಮಂಡಲ ಅಧ್ಯಕ್ಷರಾಗಿ ದಿನೇಶ್ ಪುತ್ರನ್ ಮರು ಆಯ್ಕೆ
ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ - ಮೂಡುಬಿದಿರೆ ಮಂಡಲದ ಅಧ್ಯಕ್ಷರಾಗಿ ದಿನೇಶ್ ಪುತ್ರನ್ ಅವರು ಪುನರಾಯ್ಕೆ ಗೊಂಡಿದ್ದಾರೆ.
ಮೂಡುಬಿದಿರೆ ವಿದ್ಯಾಗಿರಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಮಂಗಳವಾರ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮೂರು ವಷ೯ಗಳ ಅವಧಿಗೆ ದಿನೇಶ್ ಪುತ್ರನ್ ಅವರನ್ನು ಆಯ್ಕೆ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷರುಗಳಾದ ಸುನಿಲ್ ಆಳ್ವ, ಶಾಂತಿ ಪ್ರಸಾದ್ ಹೆಗ್ಡೆ, ಜಿಲ್ಲಾ ಮುಖಂಡರಾದ ರಾಮದಾಸ್ ಬಂಟ್ವಾಳ, ರಾಜೇಶ್ ಕಾವೇರಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ ಈ ಸಂದರ್ಭದಲ್ಲಿದ್ದರು.
0 Comments