ಹಿರಿಯ ಸಾಹಿತಿ ನಾ.ಡಿ'ಸೋಜ ನಿಧನ

ಜಾಹೀರಾತು/Advertisment
ಜಾಹೀರಾತು/Advertisment

 ಹಿರಿಯ ಸಾಹಿತಿ ನಾ.ಡಿ'ಸೋಜ ನಿಧನ



ಮೂಡುಬಿದಿರೆ: ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ  ಹಿರಿಯ ಸಾಹಿತಿ ನಾ.ಡಿಸೋಜ (87 ವ)ಅವರು ವಯೋ ಸಹಜ ಕಾಯಿಲೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. 

  ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಶರಾವತಿ ಮುಳುಗಡೆ ಪ್ರದೇಶದ ಹಿನ್ನೆಲೆ ಕಥನವಿದ್ದ ಇವರ 'ದ್ವೀಪ' ಕಾದಂಬರಿ ಸಿನಿಮಾ ಆಗಿತ್ತು. ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ಇರುವ ಪಾರ್ಥಿವ ಶರೀರ ಇಂದು ಸಂಜೆ ಸಾಗರಕ್ಕೆ ತರುವ ನಿರೀಕ್ಷೆಗಳಿವೆ. 

ಮೃತ ನಾ.ಡಿಸೋಜ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜನವರಿ 7ರಂದು ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಮಾಹಿತಿ ಪ್ರಕಟಿಸಿದ್ದಾರೆ. ಹಿರಿಯ ಸಾಹಿತಿ ನಾ.ಡಿಸೋಜ  ನಿಧನದ ವಿಷಯ ತಿಳಿಯುತ್ತಿದ್ದಂತೆ ರಾಜ್ಯದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

Post a Comment

0 Comments